
ಬೆಂಗಳೂರು[ಸೆ.13]: ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ಹೇರುವ ಮುನ್ನ ರಸ್ತೆ ಮೂಲಸೌಕರ್ಯವನ್ನು ಸುಧಾರಿಸಬೇಕು ಎಂಬ ಕೂಗು ಕೇಳಿಬರುತ್ತಿರುವಾಗಲೇ, ಅಪಘಾತಗಳಿಗೆ ಉತ್ತಮ ರಸ್ತೆಗಳೇ ಕಾರಣ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಅವರ ತರ್ಕವನ್ನೇ ಹಲವು ಮಂದಿ ಪ್ರಶ್ನಿಸಿದ್ದಾರೆ.
ಕಳಪೆ ಮೂಲಸೌಕರ್ಯದಿಂದ ಅಪಘಾತಗಳು ಸಂಭವಿಸುತ್ತಿವೆ. ಆದಾಗ್ಯೂ ದುಬಾರಿ ದಂಡ ಏಕೆ ಎಂಬ ಸುದ್ದಿಗಾರರ ಪ್ರಶ್ನೆಗೆ ಚಿತ್ರದುರ್ಗದಲ್ಲಿ ಉತ್ತರ ನೀಡಿದ ಅವರು, ಉತ್ತಮ ರಸ್ತೆಗಳಿಂದಾಗಿ ಅಪಘಾತ ಸಂಭವಿಸುತ್ತಿವೆಯೇ ಹೊರತು ಕೆಟ್ಟರಸ್ತೆಗಳಿಂದಲ್ಲ. ಹೆದ್ದಾರಿಗಳನ್ನೇ ನೋಡಿ, ವಾಹನಗಳು ಗಂಟೆಗೆ 100ರಿಂದ 120 ಕಿ.ಮೀ. ವೇಗದಲ್ಲಿ ಚಲಿಸುತ್ತಿರುತ್ತವೆ ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಕಾರಜೋಳ ಸಮರ್ಥನೆ ನೀಡಿದರು.
ಭಾರಿ ಮೊತ್ತದ ದಂಡ ಹೇರುವುದರ ಪರ ತಾವೂ ಇಲ್ಲ. ಆದರೆ ದಂಡ ಮೊತ್ತ ಇಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.