
ಬೆಂಗಳೂರು(ಅ.03): ರೈತರ ಬೆಳೆಗಳಿಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಸಿಕ್ಕಿದೆ. ನ್ಯಾಯಾಂಗ ನಿಂದನೆಯಿಂದ ಬಚಾವಾಗಲು ಸರ್ಕಾರದ ಈ ಕಸರತ್ತು ನಡೆಸಿದೆ ಎನ್ನಲಾಗಿದೆ. ಸದ್ಯ, 34 ಟಿಎಂಸಿ ನೀರಿನ ಸಂಗ್ರಹವಿದ್ದು, ರೈತರ ಬೆಳೆಗಳಿಗೆ 3 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರದ ತೀರ್ಮಾನ ಕೈಗೊಂಡಿದೆ.
ಈ ಮೊದಲು 27 ಟಿಎಂಸಿ ನೀರು ಸಂಗ್ರಹ ಇತ್ತು. ಈಗ ಹೆಚ್ಚುವರಿ 3 ಟಿಎಂಸಿ ನೀರನ್ನು ರೈತರ ಬೆಳೆಗೆ ಹರಿಸಬಹುದು. ಈ ಬಗ್ಗೆ ಸರ್ವಾನುಮತದ ನಿರ್ಧಾರ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಸರ್ಕಾರದ ನಿಲುವಿಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ನೀರು ಬಿಡುವುದಿಲ್ಲ ಎಂಬ ನಿರ್ಣಯವನ್ನೇ ಕೈಗೊಳ್ಳಲು ಆಗ್ರಹಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.