
ಕೊಪ್ಪಳ (ಆ. 20): ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಪರಿಹಾರ ಕೈಗೊಳ್ಳಲು ರಾಜ್ಯಾದ್ಯಂತ ನೆರವಿನ ಮಹಾಪೂರ ಹರಿದುಬರುತ್ತಿರುವ ಬೆನ್ನಲ್ಲೆ ಈಗ ರಾಜ್ಯ ಸರ್ಕಾರಿ ನೌಕರರು ₹ 100 ಕೋಟಿ ಪರಿಹಾರ ನೀಡಲು ನಿರ್ಧರಿಸಲು ಮುಂದಾಗಿದ್ದಾರೆ.
ರಾಜ್ಯಾದ್ಯಂತ ಸುಮಾರು 4.80 ಲಕ್ಷ ಸರ್ಕಾರಿ ನೌಕರರಿದ್ದು, ಇವರೆಲ್ಲರೂ ತಮ್ಮ ಒಂದು ದಿನದ ವೇತನ ಹಾಗೂ ಆಸಕ್ತರು ಹೆಚ್ಚಿನ ನೆರವು ನೀಡಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನದ ಒಂದು ದಿನದ ಮೊತ್ತ ₹ 80 ರಿಂದ 90 ಕೋಟಿ ಆಗುತ್ತದೆ. ಇದಕ್ಕೆ ಕೆಲವರು ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಮೊತ್ತ ನೀಡಲು ಉತ್ಸುಕರಾಗಿರುವುದರಿಂದ ₹ 100 ಕೋಟಿ ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ.
ಸರ್ಕಾರಿ ನೌಕರರ ಸಂಘದ ಬೆಂಗಳೂರು ಭವನದಲ್ಲಿ ಇಂದು ಸಂಜೆ 5.30 ಕ್ಕೆ ತುರ್ತು ಸಭೆ ಕರೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.