ಹಿಂದೂಗಳಿಗೇನಾದ್ರೂ ಮಾಡ್ರಿ: ಮೋದಿಗೆ ಗದರಿದ ಠಾಕ್ರೆ!

By Web DeskFirst Published Sep 20, 2018, 5:46 PM IST
Highlights

ಮೋದಿ ಹಿಂದೂಗಳಿಗೆ ನೀಡಿದ ಭರವಸೆ ಈಡೇರಿಸಲಿ! ಮತ್ತೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಶಿವಸೇನೆ! ತ್ರಿವಳಿ ತಲಾಖ್ ಮಸೂದೆ ಬೆಂಬಲಿಸಿದ ಶಿವಸೇನೆ! ರಾಮ ಮಂದಿರ ನಿರ್ಮಾಣಕ್ಕೆ ಮೋದಿ ಮುಂದಾಗಲಿ! ಶೀವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆಗ್ರಹ

ಮುಂಬೈ(ಸೆ.20): ತ್ರಿವಳಿ ತಲಾಖ್ ಕುರಿತಾದ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಿತ್ರಪಕ್ಷ ಶಿವಸೇನೆ ಸ್ವಾಗತಿಸಿದೆ. 

ತ್ರಿವಳಿ ತಲಾಖ್ ನಿಷೇಧಿಸುವ ಮತ್ತು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಪ್ರಸ್ತಾಪಕ್ಕೆ ಅನುಮೋದನೆ ಪಡೆದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶಿವಸೇನೆ ಸ್ವಾಗತಿಸಿದೆ. 

ಈ ಕುರಿತಂತೆ ಮಾತನಾಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ತ್ರಿವಳಿ ತಲಾಖ್ ಕುರಿತ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಇದೇ ರೀತಿ ಅಯೋಧ್ಯೆಯಲ್ಲಿಯೂ ರಾಮ ಮಂದಿರ ನಿರ್ಮಾಣ ಕುರಿತಂತೆ ನಿರ್ಧಾರನಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇವೆಂದು ಹೇಳಿದ್ದಾರೆ. 

ದೇಶದ ಹಿಂದೂಗಳಿಗೆ ಸರ್ಕಾರ ನೀಡಿದ್ದ ಭರವಸೆಗಳಲ್ಲಿ ಒಂದು ಭರವಸೆಯನ್ನಾದರೂ ಈಡೇರಿಸಲು ಸರ್ಕಾರ ಮುಂದಾಗಬೇಕು. ಹಿಂದೂಗಳ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ರಾಮ ಮಂದಿರ ನಿರ್ಮಾಣ ಕುರಿತಂತೆ ನಿರ್ಧಾರ ತೆಗೆದುಕೊಳ್ಳಬೇಕೆಂದು ಠಾಕ್ರೆ ಆಗ್ರಹಿಸಿದ್ದಾರೆ.

click me!
Last Updated Sep 20, 2018, 5:46 PM IST
click me!