
ನವದೆಹಲಿ (ನ.16): ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವುದು ಮಾಧ್ಯಮದ ಕರ್ತವ್ಯ. ಇದರಲ್ಲಿ ಸರ್ಕಾರವು ಹಸ್ತಕ್ಷೇಪ ಮಾಡಬಾರದು ಎಂದು ಪ್ರಧಾನಿ ಮೋದಿ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ ಹೇಳಿದ್ದಾರೆ.
ಮಾಧ್ಯಮಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯ ಇರಬೇಕು. ಆದರೆ ಅದು ಮಿತಿ ಮೀರಬಾ ತಾಯಿ ಮಗುವಿಗೆ ಊಟ ಮಾಡಿಸುವಾಗ ಮಿತಿಮೀರಿ ತಿನ್ನಲು ಹೇಗೆ ಬಿಡುವುದಿಲ್ಲವೋ ಹಾಗೆ ಮಾಧ್ಯಮವು ಅಗತ್ಯಕ್ಕಿಂತ ಜಾಸ್ತಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರದರ್ಶಿಸಬಾರದು ಎಂದು ಸಲಹೆ ನೀಡಿದ್ದಾರೆ.
ಮಾಧ್ಯಮವು ಸಮಾಜಕ್ಕೆ ನೀಡಿದ ಸಕಾರಾತ್ಮಕ ಕೊಡುಗೆಯನ್ನು ಶ್ಲಾಘಿಸುತ್ತಾ, ಸಮಯಕ್ಕೆ ಸರಿಯಾಗಿ ಬದಲಾವಣೆಯನ್ನು ಮಾಡಿಕೊಳ್ಳುವುದು ಸಹ ಅವರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯನ್ನು ನೆನೆಪಿಸಿಕೊಂಡು ಆ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿತ್ತು. ಮೊರಾರ್ಜಿ ದೇಸಾಯಿ ಪ್ರಧಾನಿಯಾದ ಬಳಿಕ ಇದು ಸಹಜ ಸ್ಥಿತಿಗೆ ಬಂತು ಎಂದು ಮೋದಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.