
ಬೆಂಗಳೂರು (ಅ. 24): ತೀವ್ರವಾಗಿ ಕಲ್ಲಿದ್ದಲು ಕೊರತೆ ಎದುರಿಸುತ್ತಿರುವ ಪರಿಣಾಮ ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್ ಮಾಡುವ ಸಾಧ್ಯತೆ ಇದ್ದು, ಕಲ್ಲಿದ್ದಲು ಸಮಸ್ಯೆಯಿಂದಾಗಿ ವಿದ್ಯುತ್ ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಕಲ್ಲಿದ್ದಲು ಸಮಸ್ಯೆಯಿಂದಾಗಿ ಶಾಖೋತ್ಪನ್ನ ವಿದ್ಯುತ್ ಉತ್ಪಾದ ನೆಗೆ ತೊಂದರೆಯಾಗಿದೆ. ಹೀಗಾಗಿ ಈ ಸಮಸ್ಯೆಯನ್ನು ಯಾವ ರೀತಿಯಲ್ಲಿ ಬಗೆಹರಿಸಬೇಕು ಮತ್ತು ಲೋಡ್ ಶೆಡ್ಡಿಂಗ್ ಸಮಸ್ಯೆ ಯನ್ನು
ಎದುರಿಸುವ ಬಗೆ ಹೇಗೆ ಎಂಬ ಕುರಿತು ಇಂಧನ ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಲ್ಲಿದ್ದಲು ಕೊರತೆಯಿಂದಾಗಿ ಬಳ್ಳಾರಿ ಮತ್ತು ಯರಮರಸ್‌ನಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಬಗ್ಗೆ ಕೇಂದ್ರದ ಗಮನ ಸೆಳೆಯಲು ಹಲವು ಬಾರಿ ಪತ್ರ ಬರೆದಿದ್ದೇನೆ. ಎರಡು ತಿಂಗಳಿನಿಂದ ಮನವಿ ಮಾಡಿದರೂ ರಾಜ್ಯಕ್ಕೆ ಕಲ್ಲಿದ್ದಲು ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.
ಕೇಂದ್ರ ಸರ್ಕಾರದಿಂದ ಬರಬೇಕಾದ ಕಲ್ಲಿದ್ದಲು ಬಂದಿಲ್ಲ ಎಂದು ಆರೋಪಿಸಿದರು. ಕಲ್ಲಿದ್ದಲು ಸಮಸ್ಯೆ ಕುರಿತು ಸೋಮವಾರ ಸಭೆ ನಡೆಸಿ ಚರ್ಚಿಸಲಾಗಿದೆ. ಬುಧವಾರವೂ ಸಭೆ ನಡೆಸಿ ಲೋಡ್‌ಶೆಡ್ಡಿಂಗ್ ಆಗದಂತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬು ದರ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಈಗಾಗಲೇ ಸಮಸ್ಯೆ ಕುರಿತು ಗಮನಹರಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದ ಕೆಲವು ತೀರ್ಮಾನದ ಪರಿಣಾಮ ಕಲ್ಲಿದ್ದಲು ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ.
ಅಲ್ಲದೇ, ಕೆಲವು ರಾಜ್ಯ ದಿಂದಲೂ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗು ತ್ತಿತ್ತು. ಇದರ ಜತೆಗೆ ಆ ರಾಜ್ಯಗಳಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸರಬರಾಜು ಆಗದ ಕಾರಣ
ನಮ್ಮ ರಾಜ್ಯದಲ್ಲಿ ಕೊರತೆ ಕಾಣುತ್ತಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.