
ನವದೆಹಲಿ: ಮುಸ್ಲಿಂ ಸಮುದಾಯದ ವಿವಾದಾತ್ಮಕ ‘ತ್ರಿವಳಿ ತಲಾಖ್’ ಅನ್ನು ಅಪರಾಧೀಕರಣಗೊಳಿಸುವ ಮಸೂದೆ ರಾಜ್ಯಸಭೆಯಲ್ಲಿ ಪಾಸಾಗದೇ ಬಾಕಿ ಉಳಿದ ಕಾರಣಕೇಂದ್ರ, ಸರ್ಕಾರವು ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಪರಿಶೀಲನೆ ನಡೆಸುತ್ತಿದೆ.
‘ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ’ ಹೆಸ ರಿನ ಈ ಮಸೂದೆ ಲೋಕಸಭೆಯಲ್ಲಿ ಪಾಸಾದರೂ ಇದರಲ್ಲಿನ ಅಂಶಗಳ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ಎತ್ತಿರುವ ಕಾರಣ ಪಾಸಾ ಗಿಲ್ಲ. ಹೀಗಾಗಿ ಈಗ ಸುಗ್ರೀವಾಜ್ಞೆ ಹೊರಡಿಸಿ, ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ಅಧ್ಯಾದೇಶವನ್ನು ಪಾಸು ಮಾಡಿಸಿಕೊಳ್ಳುವ ಗುರಿಯನ್ನು ಮೋದಿ ಸರ್ಕಾರ ಇರಿಸಿಕೊಂಡಿದೆ ಎಂದು ಮೂಲಗಳು ಹೇಳಿವೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆದಿದೆ ಎಂದು ಮೋದಿ ಸಂಪುಟದ ಇಬ್ಬರು ಮಂತ್ರಿಗಳು ‘ಕನ್ನಡಪ್ರಭ’ದ ಸೋದರ ಸಂಸ್ಥೆ ‘ರಿಪಬ್ಲಿಕ್ ಟೀವಿ’ಗೆ ಖಚಿತಪಡಿಸಿದ್ದಾರೆ. ತ್ರಿವಳಿ ತಲಾಖ್ ಮಸೂದೆಯು ‘ಹಠಾತ್ ತ್ರಿವಳಿ ತಲಾ ಖ್’ಅನ್ನು ನಿರ್ಬಂಧಿಸುತ್ತದೆ. ಅಲ್ಲದೆ, ೩ ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.