ಆಂಧ್ರದಲ್ಲಿ ನಿರುದ್ಯೋಗಿಗಳಿಗೆ 1000 ರು. ಮಾಸಿಕ ಭತ್ಯೆ

First Published Jun 2, 2018, 8:52 AM IST
Highlights

ಆಂಧ್ರಪ್ರದೇಶದ ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿರುವ ಎಲ್ಲ ನಿರುದ್ಯೋಗಿ ಪದವೀಧರರು ಇನ್ನುಮುಂದೆ ಪ್ರತಿ ತಿಂಗಳು ಸರ್ಕಾರದಿಂದ 1000 ರು. ನಿರುದ್ಯೋಗ ಭತ್ಯೆ ಪಡೆಯಲಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಮ್ಮ ಪಕ್ಷ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ಈ ಮೂಲಕ ಈಡೇರಿಸಿದ್ದಾರೆ. 

ಹೈದರಾಬಾದ್‌ (ಜೂ. 02):  ಆಂಧ್ರಪ್ರದೇಶದ ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿರುವ ಎಲ್ಲ ನಿರುದ್ಯೋಗಿ ಪದವೀಧರರು ಇನ್ನುಮುಂದೆ ಪ್ರತಿ ತಿಂಗಳು ಸರ್ಕಾರದಿಂದ 1000 ರು. ನಿರುದ್ಯೋಗ ಭತ್ಯೆ ಪಡೆಯಲಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಮ್ಮ ಪಕ್ಷ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ಈ ಮೂಲಕ ಈಡೇರಿಸಿದ್ದಾರೆ.

ಆಂಧ್ರದಲ್ಲಿ ಸುಮಾರು 10 ಲಕ್ಷ ಪದವೀಧರ ನಿರುದ್ಯೋಗಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಿಗೆ 35 ವರ್ಷದವರೆಗೆ ಪ್ರತಿ ತಿಂಗಳು ಸರ್ಕಾರ 1000 ರು. ನಿರುದ್ಯೋಗ ಭತ್ಯೆ ನೀಡಲಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1200 ಕೋಟಿ ರು. ಹೊರೆ ಬೀಳಲಿದೆ ಎಂದು ಸಚಿವರಾದ ಎನ್‌.ಲೋಕೇಶ್‌ ಹಾಗೂ ಕೊಲ್ಲು ರವೀಂದ್ರ ತಿಳಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಟಿಡಿಪಿ 2014ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ 2000 ರು. ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿತ್ತು. ದೇಶದಲ್ಲಿ ಸದ್ಯ ಯಾವುದೇ ರಾಜ್ಯದಲ್ಲಿ ಸರ್ಕಾರಗಳು ನಿರುದ್ಯೋಗ ಭತ್ಯೆ ನೀಡುತ್ತಿಲ್ಲ. ಉತ್ತರ ಪ್ರದೇಶದಲ್ಲಿ 1000 ರು. ನಿರುದ್ಯೋಗ ಭತ್ಯೆ ನೀಡಲಾಗುತ್ತಿತ್ತಾದರೂ ಅದನ್ನು 6 ತಿಂಗಳ ನಂತರ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. 

click me!