
ಬೆಂಗಳೂರು [ಜು.22] : ರಾಜ್ಯ ರಾಜಕೀಯ ಪ್ರಹಸನ ಮುಂದುವರಿದಿದೆ. ಸರ್ಕಾರ ಉಳಿಯುತ್ತೋ ಉರುಳುತ್ತದೆಯೋ ಎನ್ನುವ ಶಂಕೆ ನಡುವೆ ಕಲಾಪದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ.
ರಾಜಕೀಯದಲ್ಲಿ ಪಕ್ಷ ಬಿಟ್ಟು ಪಕ್ಷ ಸೇರುವುದು ಪ್ರತಿಯೊಬ್ಬ ಶಾಸಕನ ಹಕ್ಕು. ನಾಯಕನ ಹಕ್ಕೂ ಸಹ. ಇದು ಅವರ ಇಚ್ಛೆಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಗೋವಿಂದರಾಜ ನಗರ ಶಾಸಕ ವಿ. ಸೋಮಣ್ಣ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರ ಆಪರೇಷನ್ ಕಮಲದ ಹೇಳಿಕೆಗೆ ಈ ಮೂಲಕ ಮಾಜಿ ಸಚಿವ ವಿ. ಸೋಮಣ್ಣ ತಿರುಗೇಟು ನೀಡಿದ್ದಾರೆ.
ಕರ್ನಾಟಕ ರಾಜಕೀಯದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ
ಕೃಷ್ಣ ಬೈರೇಗೌಡ ಸಹ ಜನತಾದಳ ಬಿಟ್ಟು ಕಾಂಗ್ರೆಸ್ ಸೇರಿಕೊಳ್ಳಲಿಲ್ಲವೇ..? ಈ ರೀತಿಯಲ್ಲಿ ಪಕ್ಷ ಬಿಟ್ಟು ಪಕ್ಷ ಸೇರುವವರ ಬಗ್ಗೆ ಮಾತಾಡಬಾರದು ಎಂದು ಕೃಷ್ಣ ಬೈರೇಗೌಡರ ವಿರುದ್ಧ ವಿ.ಸೋಮಣ್ಣ ಗರಂ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.