ಸುವರ್ಣ ತ್ರಿಭುಜ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

By Web DeskFirst Published May 11, 2019, 11:55 AM IST
Highlights

ಸುವರ್ಣ ತ್ರಿಭುಜ ದೋಣಿ ದುರಂತದಲ್ಲಿ ಕಾಣೆಯಾದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಧನ ಘೋಷಿಸಿದೆ.

ಉಡುಪಿ: ನಾಲ್ಕೂವರೆ ತಿಂಗಳ ಹಿಂದೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟಿನೊಂದಿಗೆ ಮಹಾರಾಷ್ಟ್ರ ಸಮುದ್ರತೀರದಲ್ಲಿ ಕಾಣೆಯಾದ 7 ಮಂದಿ ಮೀನುಗಾರರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 10 ಲಕ್ಷ ರು. ಪರಿಹಾರವನ್ನು ಘೋಷಿಸಿದೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ಸಂತ್ರಸ್ತರ ಕುಟುಂಬಗಳಿಗೆ ಕರ್ನಾಟಕ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 6 ಲಕ್ಷ ರು. ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರು.ಗಳನ್ನು ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ. 

ಈಗಾಗಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 1 ಲಕ್ಷ  ರು.ಗಳನ್ನು ತುರ್ತು ಪರಿಹಾರವಾಗಿ ನೀಡಲಾಗಿದೆ, ಇನ್ನುಳಿದ 9 ಲಕ್ಷ ರು.ಗಳನ್ನು ಸಂತ್ರಸ್ತರ ಕುಟುಂಬದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದರು.

click me!