
ನವದೆಹಲಿ[ಡಿ.08]: ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್- ಹೈದರಾಬಾದ್‌ನ ಪ್ರಾಧ್ಯಾಪಕ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ಶುಕ್ರವಾರ ನೇಮಿಸಿದೆ.
ಅರವಿಂದ ಸುಬ್ರಮಣಿಯನ್ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು. ಸಂಪುಟದ ನೇಮಕಾತಿ ಸಮಿತಿ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ನೇಮಿಸಿದ್ದು, ಮೂರು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಮೂಲತಃ ತಮಿಳುನಾಡಿನವರಾದ ಸುಬ್ರಮಣಿಯನ್ ಅವರು ಸದ್ಯ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಹಣಕಾಸು ವಿಷಯದ ಸಹ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ: ಮೋದಿಗೆ ಹೊಸ ಸಲಹೆಗಾರ: ಆಗ್ತಾರಾ ಆರ್ಥಿಕತೆಯ ಹರಿಕಾರ?
ಶಿಕಾಗೋ ಬೂತ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಸುಬ್ರಮಣಿಯನ್ ಅವರು ಪಿಎಚ್‌ಡಿ ಪೂರೈಸಿದ್ದಾರೆ. ಐಐಟಿ- ಐಐಎಂನ ಅಗ್ರ ಶ್ರೇಯಾಂಕಿತ ಹಳೆಯ ವಿದ್ಯಾರ್ಥಿಯಾಗಿರುವ ಸುಬ್ರಮಣಿಯನ್ ಅವರು ಬ್ಯಾಂಕಿಂಗ್, ಕಾರ್ಪೊರೇಟ್ ಆಡಳಿತದಲ್ಲಿ ಪರಿಣತಿ ಹೊಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ