ಯುದ್ಧದಲ್ಲಿ ಮಡಿದ ಯೋಧರ ಕುಟುಂದವರಿಗೆ ಉದ್ಯೋಗ ನೀಡಲು ಸರ್ಕಾರ ಬದ್ಧ:ಸಿಎಂ

By Suvarna Web DeskFirst Published Aug 15, 2017, 9:37 PM IST
Highlights

71 ನೇ ಸ್ವತಂತ್ರ ದಿನಾಚರಣೆಯ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣವನ್ನು ಮಾಡಿ,ರಾಜ್ಯದ ಜನತೆಯನ್ನುದ್ದೇಶಿಸಿ  ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಹೇಳಿದ್ದಾರೆ.

ಬೆಂಗಳೂರು (ಆ.15): 71 ನೇ ಸ್ವತಂತ್ರ ದಿನಾಚರಣೆಯ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣವನ್ನು ಮಾಡಿ,ರಾಜ್ಯದ ಜನತೆಯನ್ನುದ್ದೇಶಿಸಿ  ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಹೇಳಿದ್ದಾರೆ.

ಸಮಸ್ತ ಬಂಧು-ಬಾಂಧವರಿಗೆ 71 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳು. ದೇಶ ರಕ್ಷಣೆಯಲ್ಲಿ ತೊಡಗಿರುವ ಸೈನಿಕರ ಬಗೆಗಿನ ನಮ್ಮ ಕಾಳಜಿ ಕೇವಲ ಬಾಯಿ ಮಾತಿನದ್ದಲ್ಲ. ಯುದ್ಧ ಕಾರ್ಯಾಚರಣೆಯಲ್ಲಿ ಮಡಿದ ಅಥವಾ ಶಾಶ್ವತ ಅಂಗವೈಕಲ್ಯ ಹೊಂದಿದ ಕರ್ನಾಟಕ ಮೂಲದ ಯೋಧರ ಕುಟುಂಬದ ಓರ್ವ  ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

Latest Videos

ಶ್ರಮಿಕವರ್ಗ ಹಾಗೂ ಬಡವರ ಹಸಿವನ್ನು ನೀಗಿಸಲು ಮಹಾತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದೆ. ಪ್ರತಿ ವಾರ್ಡ್’ಗೆ ಒಂದರಂತೆ 198 ಇಂದಿರಾ ಕ್ಯಾಂಟೀನ್’ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದೇ ರೀತಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಮಾತೃಪೂರ್ಣ ಯೋಜನೆಯನ್ನು ಮಹಾತ್ಮ ಗಾಂಧಿ 150 ನೇ ವರ್ಷಾಚರಣೆ ಸಂಸ್ಮರಣೆಯಲ್ಲಿ ಅ.02 ರಿಂದ ರಾಜ್ಯದ ಎಲ್ಲಾ ಅಂಗನವಾಡಿಗೂ ವಿಸ್ತರಿಸಲಾಗುವುದು. ಸುಮಾರು 12 ಲಕ್ಷ ಮಂದಿ ಇದರ ಲಾಭ ಪಡೆಯಲಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದ ಎಲ್ಲಾ ಅಡುಗೆ ಅನಿಲ ಸಂಪರ್ಕ ಇಲ್ಲದ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಿ ರಾಜ್ಯವನ್ನು ಸೀಮೆಎಣ್ಣೆ ಮುಕ್ತ ರಾಜ್ಯವನ್ನಾಗಿ ರೂಪಿಸುತ್ತೇವೆ. ಪಡಿತರ ಸೀಮೆ ಎಣ್ಣೆ ಬಿಟ್ಟುಕೊಡುವವರಿಗೆ ಪುನರ್ಬೆಳಕು ಯೋಜನೆಯಲ್ಲಿ ಉಚಿತವಾಗಿ ರಿಚಾರ್ಜಬಲ್ ಎಲ್’ಇಡಿ ದೀಪ ನೀಡಲು ಯೋಜಿಸಿದ್ದೇವೆ. ಅದೇ ರೀತಿ ರಾಜ್ಯವನ್ನು ಗುಡಿಸಲು ಮುಕ್ತವಾಗಿಸಿ ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ವರೆಗೆ 11.75 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 7 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. 6 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. 6 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ, ಬೆಂಗಳೂರಿನ ಸುತ್ತಮುತ್ತ ಸರ್ಕಾರಿ ಜಮೀನು ಸುತ್ತಮುತ್ತ ಸರ್ಕಾರಿ ಜಮೀನು ಹಾಗೂ ಒತ್ತುವರಿಯಿಂದ ತೆಗೆದುಕೊಂಡ ಜಮೀನಿನಲ್ಲಿ ರಾಜೀವ್ ವಸತಿ ಯೋಜನೆಯಡಿ 1 ಲಕ್ಷ ಮನೆ ನಿರ್ಮಿಸಿ ವಸತಿ ರಹಿತರಿಗೆ ಒದಗಿಸಲು ಯೋಜಿಸಲಾಗಿದೆ ಎಂದಿದ್ದಾರೆ.

 

click me!