ರಾಜ್ಯ ಸರ್ಕಾರ ಆಯೋಜಿಸಿರುವ ಟಿಪ್ಪು ಜಯಂತಿ: ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ

Published : Oct 23, 2017, 10:51 AM ISTUpdated : Apr 11, 2018, 12:46 PM IST
ರಾಜ್ಯ ಸರ್ಕಾರ ಆಯೋಜಿಸಿರುವ ಟಿಪ್ಪು ಜಯಂತಿ: ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ

ಸಾರಾಂಶ

ರಾಜ್ಯ ಸರ್ಕಾರ ಆಯೋಜಿಸುತ್ತಿರುವ ಟಿಪ್ಪು ಸುಲ್ತಾನ್​ ಜಯಂತಿಗೆ ಬಿಜೆಪಿ ವಿರೋಧ ಮುಂದುವರಿದಿದೆ. ಇತ್ತ ಟಿಪ್ಪು ಜಯಂತಿ ಆಚರಣೆ ಮಾಡಿಯೇ ಸಿದ್ಧ ಎಂದು  ಸರ್ಕಾರ ಹಠಕ್ಕೆ ಬಿದ್ದಿದೆ. ಇದರ ನಡುವೆಯೇ ಇಂದು ಬಿಜೆಪಿ ಬೆಂಗಳೂರಿನಲ್ಲಿ ಟಿಪ್ಪು ವಿರೋಧಿ ಸಮಾವೇಶ ಕೂಡ ಏರ್ಪಡಿಸಿದೆ. 

ಬೆಂಗಳೂರು(ಅ.23): ರಾಜ್ಯ ಸರ್ಕಾರ ಆಯೋಜಿಸುತ್ತಿರುವ ಟಿಪ್ಪು ಸುಲ್ತಾನ್​ ಜಯಂತಿಗೆ ಬಿಜೆಪಿ ವಿರೋಧ ಮುಂದುವರಿದಿದೆ. ಇತ್ತ ಟಿಪ್ಪು ಜಯಂತಿ ಆಚರಣೆ ಮಾಡಿಯೇ ಸಿದ್ಧ ಎಂದು  ಸರ್ಕಾರ ಹಠಕ್ಕೆ ಬಿದ್ದಿದೆ. ಇದರ ನಡುವೆಯೇ ಇಂದು ಬಿಜೆಪಿ ಬೆಂಗಳೂರಿನಲ್ಲಿ ಟಿಪ್ಪು ವಿರೋಧಿ ಸಮಾವೇಶ ಕೂಡ ಏರ್ಪಡಿಸಿದೆ. 

ಸರ್ಕಾರದ ದುಡ್ಡಿನಲ್ಲಿ ಜಯಂತಿ ಆಚರಣೆ ಮಾಡದೇ ಕಾಂಗ್ರೆಸ್​ ಕಚೇರಿಯಲ್ಲಿ ಮಾಡಿಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದರೆ, ಬಿಜೆಪಿಯವರು ಯಾರೂ ಕೂಡಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್​ ಪ್ರಕಟಿಸಿದ್ದಾರೆ.

ಈ ಮಧ್ಯೆ ಇಂದು ಬೆಂಗಳೂರಿನಲ್ಲಿ ಬಿಜೆಪಿ ಟಿಪ್ಪು ಜಯಂತಿ ಆಚರಣೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ರಾಜ್ಯಮಟ್ಟದ ಸಮಾವೇಶ ಆಯೋಜಿಸಿದೆ. ಪಕ್ಷದ ಹಿಂದುಳಿದ ವರ್ಗಗಳ ನಾಯಕರಿಗೆ ಸಮಾವೇಶದ ಮುಂದಾಳತ್ವ ನೀಡಿದ್ದು, ಸಮಾವೇಶಕ್ಕೆ ಹಿಂದುಳಿದ ವರ್ಗದವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಯೋಜಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!