
ಬೆಂಗಳೂರು (ಅ.13): ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ಸ್ಟೀಲ್‌ಬ್ರಿಡ್ಜ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಈ ಯೋಜನೆಗೆ ನಗರದ ಶೇ.೭೩ರಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಮೂಲ ಸೌಲಭ್ಯದ ಅಭಿವೃದ್ಧಿಯಾಗಬೇಕು. ಆದರೆ ಆತುರ ಮಾಡಬಾರದು. ಸಾರ್ವಜನಿಕರ ಅಭಿಪ್ರಾಯ ಪಡೆದು ಇಂತಹ ಕಾಮಗಾರಿ ಮುನ್ನಡೆಸಬೇಕು ಎಂದು ಸಲಹೆ ಮಾಡಿದರು.
ಸ್ಟೀಲ್ ಬ್ರಿಡ್ಜ್ ಕಾಮಗಾರಿಗಾಗಿ ಆರಂಭದಲ್ಲಿ ೧,೩೯೯ ಕೋಟಿ ರೂ. ಅಂದಾಜು ವೆಚ್ಚ ಮಾಡಲಾಗಿತ್ತು. ಆದರೆ ಇದಾದ ನಂತರ ಕಬ್ಬಿಣದ ಬೆಲೆ ಕುಸಿತ ಕಂಡಿದೆ. ಆದರೂ ಸಹ ಇದೀಗ ಈ ಕಾಮಗಾರಿಯ ಮೊತ್ತ ೧,೮೯೯ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದ ಅವರು, ಇಂತಹ ವಿಚಾರದಲ್ಲಿ ಸರ್ಕಾರ ಪಾರದರ್ಶಕವಾಗಿರಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.