ಬಿಬಿಎಂಪಿ ನೌಕರಿಗೆ ರಾಜ್ಯ ಸರ್ಕಾರ ಶಾಕ್: ನೌಕರರ ಪ್ರತಿಭಟನೆ ತಡೆಯಲು ಎಸ್ಮಾ ಜಾರಿ

By Suvarna web DeskFirst Published Sep 24, 2017, 10:50 AM IST
Highlights

ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪದೇ ಪದೇ ಪ್ರತಿಭಟನೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಎಸ್ಮಾ ಕಾಯ್ದೆ ಜಾರಿಗೊಳಿಸಿದೆ. ನಿನ್ನೆ ಮಲ್ಲೇಶ್ವರಂನ ಪಾಲಿಕೆ ಕಚೇರಿಯಲ್ಲಿ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯ್ತು.

ಬೆಂಗಳೂರು(ಸೆ.24): ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪದೇ ಪದೇ ಪ್ರತಿಭಟನೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಎಸ್ಮಾ ಕಾಯ್ದೆ ಜಾರಿಗೊಳಿಸಿದೆ. ನಿನ್ನೆ ಮಲ್ಲೇಶ್ವರಂನ ಪಾಲಿಕೆ ಕಚೇರಿಯಲ್ಲಿ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯ್ತು.

ಇನ್ನು ಬಿಬಿಎಂಪಿ ವ್ಯಾಪ್ತಿಯ ಪೌರ ಕಾರ್ಮಿಕರು ಕರ್ತವ್ಯಕ್ಕೆ ಹಾಜರಾಗುವುದನ್ನು ಕಡ್ಡಾಯಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದೆ. ಸರಬರಾಜುದಾರರು ಮತ್ತು ಗುತ್ತಿಗೆದಾರರ ಅಧೀನದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪೌರ ಕಾರ್ಮಿಕರು, ಆಟೋ ಸಹಾಯಕರು, ಕಾಂಪ್ಯಾಕ್ಟರ್ ಲೋಡರ್‌ಗಳು, ಚಾಲಕರಿಗೆ ಎಸ್ಮಾ ಅನ್ವಯ ಆಗಲಿದೆ.

ಅಷ್ಟೇ ಅಲ್ಲದೆ ಇನ್ನು ಒಂದು ವರ್ಷದವರೆಗೆ ಈ ನೌಕರು ಮುಷ್ಕರ ಹೂಡುವುದನ್ನು ನಿಷೇಧಿಸಲಾಗಿದೆ. ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು, ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾಗುವುದನ್ನು ತಡೆಗಟ್ಟುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಅಂತ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ರು.

click me!