
ಬೆಂಗಳೂರು(ಅ.30): ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಶಾಕ್ ಕೊಡಲು ರಾಜ್ಯ ಸರ್ಕಾರ ರೆಡಿಯಾಗಿದೆ. ಸರ್ಕಾರದ ವಿರುದ್ಧ ಸಮರ ಸಾರಿರುವ ಮಾಜಿ ಸಿಎಂ ಯಡಿಯೂರಪ್ಪಗೆ ತಿರುಗೇಟು ಕೊಡಲು ಶೋಭಾ ಅಸ್ತ್ರ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದಂತಿದೆ. ಯಾಕಂದ್ರೆ, ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿದ್ದಾಗ ನಡೆದಿದೆ ಎನ್ನಲಾದ 28 ಸಾವಿರ ಕೋಟಿ ರೂ. ವಿದ್ಯುತ್ ಹಗರಣದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ರಚಿಸಿದ್ದ ಸದನ ಸಮಿತಿ ಇಂದು ತನ್ನ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕೊನೆಯ ಸಭೆ ನಡೆಯಲಿದೆ. ಸಮಿತಿಯ ವರದಿ ಬಹುತೇಕ ಸಿದ್ಧಗೊಂಡಿದೆ. ಮತ್ತೊಮ್ಮೆ ವರದಿ ಬಗ್ಗೆ ಚರ್ಚೆ ನಡೆದು ಅಂತಿಮಗೊಳಿಸಿದ ನಂತರ ಸ್ಪೀಕರ್ಗೆ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ವಿದ್ಯುತ್ ಖರೀದಿ ವಿಚಾರ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ.
ಈ ವರದಿ ಸಲ್ಲಿಕೆಯಾದ ಬಳಿಕ ಮತ್ತಷ್ಟು ರಾಜಕೀಯ ಜೋರಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ, ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಶೋಭಾ ಅವಧಿಯ ವಿದ್ಯುತ್ ಖರೀದಿ ಅಕ್ರಮ ಪ್ರಸ್ತಾಪಿಸಿದ್ರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆಶಿ, ತಮ್ಮ ಬದ್ಧ ರಾಜಕೀಯ ವೈರಿ ಕುಮಾರಸ್ವಾಮಿ ನಿವಾಸಕ್ಕೆ ತೆರಳಿ ಸದನ ಸಮಿತಿ ವರದಿ ಸಂಬಂಧ ಮನವೊಲಿಸಿದ್ರು..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.