
ಮಂಗಳೂರು : ಮತೀಯ ಅಟ್ಟಹಾಸಕ್ಕೆ ಬಲಿಯಾದ ಸುರತ್ಕಲ್‌ನ ದೀಪಕ್‌ರಾವ್ ಕುಟುಂಬದ ಜೀವನಕ್ಕೆ ಕೇಂದ್ರ ಸರ್ಕಾರ ಆಧಾರವಾಗಿ ನಿಲ್ಲಲು ಮುಂದಾಗಿದೆ. ದೀಪಕ್ ಸೋದರ ಸತೀಶ್‌ಗೆ ಕೇಂದ್ರ ಸ್ವಾಮ್ಯದ ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಆಫರ್ ಬಂದಿದೆ.
ಸಹೋದರ ಸತೀಶ್ ಅವರು ಒಂದಕ್ಷರವೂ ಕಲಿತಿಲ್ಲ. ಹುಟ್ಟಿನಿಂದಲೇ ಸತೀಶ್‌ಗೆ ಮಾತೂ ಬರುವುದಿಲ್ಲ, ಕಿವಿಯೂ ಕೇಳುತ್ತಿಲ್ಲ. ಹೀಗಾಗಿ ಅವರನ್ನು ಶಾಲೆಗೆ ಕಳುಹಿಸಲು ಹೆತ್ತವರಿಗೆ ಸಾಧ್ಯವಾಗಿಲ್ಲ. ಈಗ ಸತೀಶ್‌ಗೆ 28 ವರ್ಷ. ಸತೀಶ್‌ಗೆ ಪಣಂಬೂರಿನಲ್ಲಿರುವ ಕೆಐಒಸಿಎಲ್ ಕಂಪನಿಯಲ್ಲಿ ಮಾನವೀಯ ನೆಲೆಯಲ್ಲಿ ಕೆಲಸ ನೀಡಲು ಆಫರ್ ನೀಡಲಾಗಿದೆ. ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಇತ್ತೀಚೆಗೆ ದೀಪಕ್ ಮನೆಗೆ ಭೇಟಿ ನೀಡಿದ್ದರು. ಆ ವೇಳೆ ಸಹೋದರ ಸತೀಶ್‌ಗೆ ಮಾನವೀಯ ನೆಲೆಯಲ್ಲಿ ಉದ್ಯೋಗದ ಭರವಸೆ ನೀಡಿದ್ದರು.
ಅಂದೇ ಕೆಐಒಸಿಎಲ್‌ಗೆ ತೆರಳಿದ್ದ ಹೆಗಡೆ, ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದರು. ಬಳಿಕ ಸತೀಶ್ ಅವರಿಂದ ಅಗತ್ಯ ದಾಖಲೆಗಳನ್ನು ತರಿಸಿಕೊಂಡ ಕೆಐಒಸಿಎಲ್ ಅಧಿಕಾರಿಗಳು, ಸತೀಶ್‌ಗೆ ಕಂಪನಿಯಲ್ಲಿ ಕಾಯಂ ಉದ್ಯೋಗಕ್ಕೆ ಸಮ್ಮತಿ ಸೂಚಿಸಿದ್ದರು.
ಇನ್ನು ಒಂದು ವಾರದೊಳಗೆ ಉದ್ಯೋಗ ನೇಮಕಾತಿ ಪತ್ರ ಸತೀಶ್ ಅವರ ಕೈಸೇರುವ ನಿರೀಕ್ಷೆ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಅಟೆಂಡರ್ ಅಥವಾ ಗ್ರೂಪ್ ಡಿ ಹುದ್ದೆಗೆ ನೇಮಕಗೊಳ್ಳುವ ಸಾಧ್ಯತೆ ಇದೆ ಎನ್ನುತ್ತಾರೆ ಬಿಜೆಪಿ ಹಿಂದುಳಿದ ವರ್ಗಗಳ ಮುಖಂಡ ಸತ್ಯಜಿತ್ ಸುರತ್ಕಲ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.