
ಬೆಂಗಳೂರು: ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ಆಡಳಿತ ಯಂತ್ರಕ್ಕೆ ಬೃಹತ್ ಸರ್ಜರಿಯನ್ನು ನಡೆಸಲು ರಾಜ್ಯ ಸರ್ಕಾರ ನಡೆಸಿದ್ದು, ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯಕಟ್ಟಿನ ಜಾಗಕ್ಕೆ ತಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿರುವ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಜ್ಜಾಗಿದೆ ಎಂಬ ಗಂಭೀರ ಆರೋಪ ಬಿಜೆಪಿ ವಲಯದಿಂದ ಕೇಳಿ ಬಂದಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮಾ. 7 ರಿಂದ ಮಾ. 18ರ ವೇಳೆಗೆ ವೇಳಾಪಟ್ಟಿ ಪ್ರಕಟಗೊಂಡು ನೀತಿ ಸಂಹಿತೆ ಜಾರಿಯಾಗುವ ಸುಳಿವು ಸರ್ಕಾರಕ್ಕೆ ದೊರಕಿದೆ. ಹೀಗಾಗಿಯೇ ಮಾರ್ಚ್ ಮೊದಲ ವಾರದ ನಂತರ ನಿಗದಿಯಾಗಿದ್ದ ಸರ್ಕಾರಿ ಕಾಮಗಾರಿಗಳು ವಿಶೇಷವಾಗಿ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮಗಳನ್ನು ಫೆಬ್ರವರಿ ಮಾಸಾಂತ್ಯ ಹಾಗೂ ಮಾರ್ಚ್ ಮೊದಲ ವಾರದ ಆರಂಭದ ದಿನಗಳಿಗೆ ಮರು ನಿಗದಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.