
ಬೆಂಗಳೂರು (ಏ.25): ಉಕ್ಕಿನ ಮೇಲ್ಸೇತುವೆ ನಿರ್ಮಿಸುತ್ತೇವೆ ಎಂದು ಪಟ್ಟು ಹಿಡಿದಿದ್ದ ಆಡಳಿತಾರೂಢ ಸರ್ಕಾರ, ಈಗ ಬೆಂಗಳೂರಿನ ನಾಲ್ಕು ಕಡೆ ಸುರಂಗ ಮಾರ್ಗ ನಿರ್ಮಾಣ ಮಾಡಲು ಮುಂದಾಗಿದೆ.
ನಿನ್ನೆ ಬೆಂಗಳೂರಿಗೆ ಆಗಮಿಸಿದ ಬಲ್ಗೇರಿಯಾ ಮೂಲದ ಕಂಪನಿಯ ಪ್ರತಿನಿಧಿಗಳು , ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಬಿಬಿಎಂಪಿ ಮೇಯರ್ ಪದ್ಮಾವತಿ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಹಾಗೂ ಬಿಡಿಎ ಅಧಿಕಾರಿಗಳ ಜೊತೆ ಸುರಂಗ ರಸ್ತೆ ನಿರ್ಮಾಣದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆ ಬಲ್ಗೇರಿಯಾದಿಂದ ಬಂದಿದ ಪ್ರತಿನಿಧಿಗಳು ನಗರ ಪ್ರದಕ್ಷಿಣೆ ಮಾಡಿ ಅತೀ ಹೆಚ್ಚು ಟ್ರಾಫಿಕ್ ಇರುವ ನಾಲ್ಕು ಸ್ಥಳಗಳನ್ನು ಗುರುತಿಸಿದ್ದಾರೆ. ನಾಯಂಡಹಳ್ಳಿ ಜಂಕ್ಷನ್’ನಿಂದ ಶಾಂತಲಾ ಸಿಲ್ಕ್ ಹೌಸ್ ವರೆಗೂ, ಕುಮಾರಸ್ವಾಮಿ ರಸ್ತೆಯಿಂದ ಹೆಬ್ಬಾಳ ಜಂಕ್ಷನ್ ವರೆಗೂ, ಜಾಲಹಳ್ಳಿಯಿಂದ ಏರ್ ಫೋರ್ಸ್ ಸ್ಟೇಷನ್ ಮತ್ತು ಗೊರಗುಂಟೆಪಾಳ್ಯದಿಂದ ರಾಜಕುಮಾರ್ ಸಮಾಧಿವರೆಗೂ ಸುರಂಗ ರಸ್ತೆ ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ.
ಪ್ರತಿ 1ಕಿಮೀ ಸುರಂಗ ರಸ್ತೆ ನಿರ್ಮಾಣಕ್ಕೆ 500 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದೆ ಎಂದು ಬಿಬಿಎಂಪಿ ಮೇಯರ್ ಪದ್ಮಾವತಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.