
ನವದೆಹಲಿ(ಜು.09): ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಸೇನೆ ನಡೆಸಿದ್ದ ಬಾಲಾಕೋಟ್ ವಾಯುದಾಳಿಯ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.
ಜೈಷ್ ಎ ಮೊಹಮದ್ ಉಗ್ರರ ತರಬೇತಿ ಕೇಂದ್ರ ಮತ್ತು ನೆಲೆಗಳ ಮೇಲೆ ನಡೆಸಿದ ವಾಯುದಾಳಿ ಬಳಿಕ, ಭಾರತದೊಳಗೆ ಪಾಕಿಸ್ತಾನ ಉಗ್ರರು ನುಸುಳುವ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಈ ಕುರಿತು ಸದನಕ್ಕೆ ಮಾಹಿತಿ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ಬಾಲಾಕೋಟ್ ದಾಳಿ ಬಳಿಕ ಉಗ್ರರ ಒಳನುಸುಳುವಿಕೆ ಪ್ರಮಾಣ ಶೇ. 43ರಷ್ಟು ಕಡಿಮೆ ಆಗಿದೆ ಎಂದು ತಿಳಿಸಿದ್ದಾರೆ.
ಕಣಿವೆಯಲ್ಲಿ ಉಗ್ರವಾದದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು, ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ನುಸುಳದಂತೆ ತಡೆಯಲು ವಿವಿಧ ಹಂತದಲ್ಲಿ ಸೇನೆ ನಿಯೋಜಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.