ಕೇಂದ್ರಕ್ಕೆ ಸಚಿವರಿಂದಲೇ ಮುಜುಗರ!

Published : Aug 01, 2017, 12:33 PM ISTUpdated : Apr 11, 2018, 01:00 PM IST
ಕೇಂದ್ರಕ್ಕೆ ಸಚಿವರಿಂದಲೇ ಮುಜುಗರ!

ಸಾರಾಂಶ

ಸಂಸತ್ತು ಕಲಾಪಗಳಲ್ಲಿ ಸಂಸದರ ಗೈರು ಹಾಜರಾತಿ ಬಗ್ಗೆ ಇತ್ತೀಚೆಗೆ  ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಇಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ತೀವ್ರ ಮುಜುಗರಕ್ಕೊಳಗಾದ ಘಟನೆ ನಡೆದಿದೆ,

ನವದೆಹಲಿ: ಸಂಸತ್ತು ಕಲಾಪಗಳಲ್ಲಿ ಸಂಸದರ ಗೈರು ಹಾಜರಾತಿ ಬಗ್ಗೆ ಇತ್ತೀಚೆಗೆ  ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಇಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ತೀವ್ರ ಮುಜುಗರಕ್ಕೊಳಗಾದ ಘಟನೆ ನಡೆದಿದೆ,

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವ ಕುರಿತು ಮಸೂದೆಯನ್ನು ಕೇಂದ್ರವು ಇಂದು ರಾಜ್ಯಸಭೆಯಲ್ಲಿ ಪರಿಚಯಿಸಿತ್ತು. ಆದರೆ ಆ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರದ ಸಚಿವರು ಸೇರಿದಂತೆ ಸುಮಾರು 30 ಸಂಸದರೇ ಗೈರು ಹಾಜರಾಗಿದ್ದಾರೆ.

ಕೇಂದ್ರ ಸಚಿವ ವಿಜಯ್ ಗಓಯಲ್, ನಿರ್ಮಲಾ ಸೀತರಾಮನ್, ಸ್ಮೃತಿ ಇರಾನಿ., ರವಿಶಂಕರ್ ಪ್ರಸಾದ್, ಧರ್ಮೇಂದ್ರ ಪ್ರಧಾನ್, ಪಿಯುಶ್ ಗೋಯಲ್, ಎಂಜೆ ಅಕ್ಬರ್ ಹಾಗೂ ರಾಮದಾಸ್ ಅಥಾವಳೆ ಮುಂತಾದವರೇ ಕಲಾಪಗಳಿಗೆ ಗೈರು ಹಾಜರಾಗಿದ್ದಾರೆ.

ಮಿತ್ರ ಪಕ್ಷಗಳಾದ ಎಐಡಿಎಂಕೆ ಹಾಗೂ ಅಕಾಲಿ ಸಳದ ಸದಸ್ಯರೂ ಕೂಡಾ ಕಲಾಪಗಳಿಗೆ ಹಾಜರಾಗಿಲ್ಲ.

ಮುಂಬರುವ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿಯು ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಲು ಮುಂದಾಗಿದ್ದು, ಈ ಬಗ್ಗೆ ಮಸೂದೆಯನ್ನು ಸಿದ್ಧಪಡಿಸಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ