ನೀರು ಬಿಡದಿರಲು ದಿಟ್ಟ ನಿರ್ಣಯ ಅಂಗೀಕರಿಸಿದ ಸಿಎಂ

Published : Sep 21, 2016, 11:42 AM ISTUpdated : Apr 11, 2018, 12:45 PM IST
ನೀರು ಬಿಡದಿರಲು ದಿಟ್ಟ ನಿರ್ಣಯ ಅಂಗೀಕರಿಸಿದ ಸಿಎಂ

ಸಾರಾಂಶ

ಬೆಂಗಳೂರು(ಸೆ.21): ರಾಜ್ಯದ ಇತಿಹಾಸದಲ್ಲಿ ದಾಖಲಾಗುವ  ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುರ್ತು ಸಚಿವ ಸಂಪುಟದ ನಂತರ ತೆಗೆದುಕೊಂಡರು.

ಸರ್ವಾನುಮತದಿಂದ ಅಂಗೀಕರಿಸಲಾದ ನಿರ್ಣಯದ ಸಾಲುಗಳು ಹೀಗಿವೆ

''ಮಾನ್ಯ ಸರ್ವೋಚ್ಛ ನ್ಯಾಯಾಲಯವು 20/09/2016 ರಂದು ನೀಡಿದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಸರ್ಕಾರವು ಇಂದು ಕರೆದ ಸರ್ವಪಕ್ಷ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಸರ್ವಪಕ್ಷ ಸಭೆಯಲ್ಲಿ ತಕ್ಷಣ ಉಬಯ ಸದನಗಳ ಸಭೆಯಲ್ಲಿ ಕರೆಯಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ 23/09/2016 ರಂದು ಬೆಳಿಗ್ಗೆ 11 ಗಂಟೆಗೆ ಉಬಯ ಸದನಗಳ ಸಭೆ ಕರೆಯುವಂತೆ ಘನತವೆತ್ತ ರಾಜ್ಯಪಾಲರನ್ನು ಕೋರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು. ಉಬಯ ಸದನಗಳಲ್ಲಿ ತೀರ್ಮಾನವಾಗುವವರೆಗೂ ತಮಿಳುನಾಡಿಗೆ ನೀರು ಬಿಡುವ ವಿಚಾರವನ್ನು ಮುಂದೂಡಲಾಯಿತು'.

ಸರ್ವಪಕ್ಷ ಸಭೆಯಲ್ಲಿ ಜೆಡಿಎಸ್ ರಾಷ್ಟ್ರದ್ಯಕ್ಷ ಹೆಚ್.ಡಿ. ದೇವೇಗೌಡ, ಕಾರ್ಯಧ್ಯಕ್ಷ ಕುಮಾರಸ್ವಾಮಿ, ಸರ್ವೋದಯ ಪಕ್ಷದ ಕೆ.ಎಸ್.ಪುಟ್ಟಣ್ಣಯ್ಯ ಭಾಗವಹಿಸಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ