ಮುಂದಿನ ವರ್ಷ ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಸಿಎಂ

By Suvarna Web DeskFirst Published Apr 11, 2017, 2:14 PM IST
Highlights

ಅಕ್ಕಮಹಾದೇವಿ ರಾಜ್ಯ ಪ್ರಶಸ್ತಿಯನ್ನು ಹಂಪಿ ಕನ್ನಡ ವಿವಿ ಉಪ-ಕುಲಪತಿ ಮಲ್ಲಿಕಾ ಘಂಟಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ಬೆಂಗಳೂರು (ಏ.11): ಮುಂದಿನ ವರ್ಷದಿಂದ ಸರ್ಕಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಅಕ್ಕಮಹಾದೇವಿ ರಾಜ್ಯ ಪ್ರಶಸ್ತಿಯನ್ನು ಹಂಪಿ ಕನ್ನಡ ವಿವಿ ಉಪ-ಕುಲಪತಿ ಮಲ್ಲಿಕಾ ಘಂಟಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

click me!