27ರಂದು ರಾಜ್ಯ ಸರ್ಕಾರದಿಂದಲೇ ಕೆಂಪೇಗೌಡ ಜಯಂತಿ ಆಚರಣೆ

Published : Jun 16, 2017, 10:04 AM ISTUpdated : Apr 11, 2018, 12:53 PM IST
27ರಂದು ರಾಜ್ಯ ಸರ್ಕಾರದಿಂದಲೇ ಕೆಂಪೇಗೌಡ ಜಯಂತಿ ಆಚರಣೆ

ಸಾರಾಂಶ

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರದಿಂದ ಜೂನ್‌ 27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಚರಿಸಲು ಗುರುವಾರ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರದಿಂದ ಜೂನ್‌ 27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಚರಿಸಲು ಗುರುವಾರ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಚಿವ ಶಿವಕುಮಾರ್‌, ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಸಂಘ-ಸಂಸ್ಥೆಗಳ ನೆರವು ಅಗತ್ಯ. ಜಯಂತಿ ಅಂಗವಾಗಿ ಬೆಂಗಳೂರು, ಮಾಗಡಿ ಮತ್ತು ಆವತಿಗಳಿಂದ ಜ್ಯೋತಿ ತರುವುದು, ಪುಸ್ತಕ ಬಿಡುಗಡೆ, ವಸ್ತು ಪ್ರದರ್ಶನ, ಉಪನ್ಯಾಸ, ಕಲಾ ಪ್ರದರ್ಶನ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.

ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮಾತನಾಡಿ, ಕೆಂಪೇಗೌಡರ ಇತಿಹಾಸವನ್ನು ನಾಡಿಗೆ ಸಾರುವ ಕಾರ್ಯಕ್ರಮವಾಗಿ ಜಯಂತಿ ಆಚರಿಸಲಾಗುತ್ತಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರ ಬಳಕೆ ಕುರಿತಂತೆ ಸಚಿವ ಶಿವಕುಮಾರ್‌ ಅವರು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ನಾಥ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಕೆಂಪೇಗೌಡರ ಕುರಿತು ಹತ್ತು ಹಲವು ಪುಸ್ತಕಗಳಿದ್ದರೂ ಅವುಗಳನ್ನು ಪರಾಮರ್ಶಿಸಿ ಹೊಸ ಪುಸ್ತಕವೊಂದನ್ನು ಹೊರತರುವ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿಸಿದರು. ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ಬೆಟ್ಟೇಗೌಡ, ಮಂಜೇಗೌಡ, ಕಾಳೇಗೌಡ, ರಾಮಚಂದ್ರ, ಅ. ದೇವೇಗೌಡ ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ 170 ಸ್ಥಾನದ ಭರ್ಜರಿ ಗೆಲುವು, 7ಕ್ಕೆ ಕುಸಿದ ಕಾಂಗ್ರೆಸ್
'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್‌ಗೆ ಭಾರೀ ಕಾಮೆಂಟ್ಸ್‌!