
ನವದೆಹಲಿ: 2 ಲಕ್ಷ ರು. ಅಥವಾ ಅದಕ್ಕಿಂತ ಮೇಲ್ಪಟ್ಟನಗದು ವ್ಯವ ಹಾರವನ್ನು ಏ.1ರಿಂದಲೇ ಜಾರಿಗೆ ಬರುವಂತೆ ನಿಷೇಧಿಸಿರುವ ಕೇಂದ್ರ ಸರ್ಕಾರ ಈ ಕುರಿತು ಸಾರ್ವಜನಿಕ ರಿಗೆ ಎಚ್ಚರಿಕೆ ನೀಡಿದೆ. ಯಾರಾದರೂ 2 ಲಕ್ಷ ಅಥವಾ ಅದಕ್ಕೆ ಮೇಲ್ಪಟ್ಟನಗದನ್ನು ಸ್ವೀಕರಿಸಿದರೆ, ಅಷ್ಟೇ ಮೊತ್ತದಷ್ಟುದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದೆ.
ಅಲ್ಲದೆ, ಇಂತಹ ವ್ಯವಹಾರ ನಡೆಸುವವರ ಬಗ್ಗೆ ಮಾಹಿತಿ ಇದ್ದರೆ, blackmoneyinfo@incometax.gov.in'ಗೆ ಇ-ಮೇಲ್ ಮಾಡುವಂತೆ ಕೋರಿಕೊಂಡಿದೆ.
2017-18ನೇ ಸಾಲಿನ ಬಜೆಟ್‌ನಲ್ಲಿ 3 ಲಕ್ಷ ರು. ಮೇಲ್ಪಟ್ಟನಗದು ವ್ಯವಹಾರ ನಿಷೇಧಿಸುವ ಕುರಿತು ವಿತ್ತ ಸಚಿವ ಅರುಣ್ ಜೇಟ್ಲಿ ಘೋಷಣೆ ಮಾಡಿದ್ದರು. ಬಳಿಕ ಹಣಕಾಸು ಮಸೂದೆಯಲ್ಲಿ ಅದನ್ನು 2 ಲಕ್ಷ ರು.ಗೆ ಇಳಿಸಲಾಗಿತ್ತು. ಏ.1ರಿಂದಲೇ ಈ ನಿಯಮ ಜಾರಿಗೆ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.