
ಮೂರುಗಂಟಿನ ನಂಟಿನ ಮೂಲಕ ಹೊಸ ಜೀವನಕ್ಕೆ ಕಾಲಿಡಬೇಕಾದವರ ಜೀವನಕ್ಕೆ, ಜವರಾಯ ಎಂಟ್ರಿ ಕೊಟ್ಟುಬಿಟ್ಟ. ಇನ್ನೇನು ಕೆಲವೇ ಕ್ಷಣದಲ್ಲಿ ತಾಳಿ ಕಟ್ಟಿ ಸಪ್ತಪದಿ ತುಳಿಯಬೇಕಿದ್ದ ವರ, ಯಮಪಾಶಕ್ಕೆ ಗುರಿಯಾದ. ಇಂತಹದೊಂದು ಹೃದಯ ವಿದ್ರಾವಕ ಘಟನೆ ತುಮಕೂರಿನ ಗವಿರಂಗ ಕಲ್ಯಾಣ ಮಂಟಪದಲ್ಲಿ ನಡೆದಿದೆ. ವರ ವಸಂತಕುಮಾರ ತಾಳಿ ಕಟ್ಟುವ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕಾತ್ಯಾಯಿನಿ ಎಂಬ ವಧುವನ್ನು ವರಿಸ ಬೇಕಿದ್ದ ವಸಂತ್ ಕುಮಾರ್, ದುರಾದೃಷ್ಟವಶಾತ್ ಹೃದಯಾಘಾತದಿಂದ ವಿಧಿವಶವಾಗಿದ್ದು, ಮದುವೆ ಸಂಭ್ರಮವಿರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.