
ಮುಂಬೈ[ಮೇ.14]: GST ಅಧಿಕಾರಿಯೊಬ್ಬರು ಮುಂಬೈನ ವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಯಾಗಿದೆ.
ಸೋಮವಾರದಂದು 51 ವರ್ಷದ GST ಅಧಿಕರಿಯೊಬ್ಬರು ಮುಂಬೈ ಕೆಫೆ ಪರೇಡ್ ನ ವರ್ಲ್ಡ್ ಟ್ರೇಡ್ ಸೆಂಟರ್ ನ 31ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಆತ್ಮಹತ್ಯೆಗೆ ಕಾರಣವೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.
ಮೃತ ವ್ಯಕ್ತಿಯನ್ನು ಹರಿಂದರ್ ಕಪಾಡಿಯಾ ಎಂದು ಗುರುತಿಸಲಾಗಿದ್ದು,. ಸೋಮವಾರ ಸಂಜೆ ಸುಮಾರು 6 ಗಮಟೆಗೆ ಈ ದುರ್ಘಟನೆ ನಡೆದಿದೆ. ವ್ಯಕ್ತಿ ಕೆಳ ಬೀಳುತ್ತಿದ್ದಂತೆಯೇ ಸುತ್ತಮುತ್ತಲಿನ ಜನ ನೆರೆದಿದ್ದಾರೆ ಹಾಗೂ ಕಪಾಡಿಯಾರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ನಡೆಸಿದ್ದಾರೆ. ದುರಾದೃಷ್ಟವಶಾತ್ ಕಪಾಡಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.