
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ಪ್ರಮಾಣ 13 ಲಕ್ಷ ಕೋಟಿ ರು. ದಾಟಬಹುದು ಎಂದು ಹಣಕಾಸು ಸಚಿವ ಪೀಯೂಷ್ ಗೋಯೆಲ್ ಅದಮ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೆಚ್ಚು ಹೆಚ್ಚು ಜನರು ತೆರಿಗೆ ಜಾಲಕ್ಕೆ ಸೇರ್ಪಡೆಯಾಗುತ್ತಿರುವುದರಿಂದ, ಇ-ವೇ ಬಿಲ್ ವ್ಯವಸ್ಥೆ ಯಶಸ್ವಿಯಾಗಿ ಜಾರಿಯಾಗಿರುವುದರಿಂದ ತೆರಿಗೆ ಸ್ಲ್ಯಾಬ್‌ಗಳ ಪರಿಷ್ಕರಣೆಗೆ ಅವಕಾಶ ಇರಲಿದೆ ಎಂಬ ಹೊಸ ಆಸೆಯನ್ನೂ ಹುಟ್ಟಿಸಿದ್ದಾರೆ.
ಜಿಎಸ್‌ಟಿ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಜುಲೈನಲ್ಲಿ ಜಾರಿಯಾಗಿದ್ದ ಜಿಎಸ್‌ಟಿಯಿಂದ 2017- - 18 ನೇ ಸಾಲಿನಲ್ಲಿ 7.41 ಲಕ್ಷ ಕೋಟಿ ರು. ತೆರಿಗೆ ಸಂಗ್ರಹವಾಗಿತ್ತು. ಮಾಸಿಕ 89 ,885 ಕೋಟಿ ರು. ಆದಾಯ ಬಂದಿತ್ತು. ಪ್ರಸಕ್ತ ವರ್ಷ ಏಪ್ರಿಲ್‌ನಲ್ಲಿ 1.03 ಲಕ್ಷ ಕೋಟಿ ರು.ವರೆಗೂ ಸಂಗ್ರಹವಾಗಿದೆ.
ಸರಾಸರಿ ಮಾಸಿಕ ತೆರಿಗೆ ಸಂಗ್ರಹ 1.10 ಲಕ್ಷ ಕೋಟಿ ರು.ಗೆ ಏರಿ, 13 ಲಕ್ಷ ಕೋಟಿ ರು.ಗಿಂತ ಆದಾಯ ಬರುವ ನಿರೀಕ್ಷೆ ಇದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.