
ಗಾಂಧಿನಗರ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತ್ಯಜಿಸಿದ್ದ ಗುಜರಾತಿನ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಸೋಮವಾರ ಉಪಮುಖ್ಯಮಂತ್ರಿ ನಿತಿನ್‌ಭಾಯ್ ಪಟೇಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಹೀಗಾಗಿ ಠಾಕೂರ್ ಬಿಜೆಪಿಗೆ ಸೇರ್ಪಡೆಯಾಗಬಹುದು ಎನ್ನಲಾಗುತ್ತಿದೆ. 2017ರ ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ಅಲ್ಪೇಶ್ ಕಾಂಗ್ರೆಸ್ ಸೇರಿ, ಪಠಾಣ್ ಜಿಲ್ಲೆಯ ರಾಧಾನ್‌ಪುರನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.
2019ರ ಏಪ್ರಿಲ್‌ನಲ್ಲಿ ಕಾಂಗ್ರೆಸ್ ತೊರೆದಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾಗಬಹುದು ಎಂಬ ಬಗ್ಗೆ ವದಂತಿಗಳು ಹಬ್ಬಿದ್ದವು. ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಕೆಲವೇ ದಿನಗಳಲ್ಲಿ ಅಲ್ಪೇಶ್ ಅವರು ಗುಜರಾತ್ ಡಿಸಿಎಂ ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.