
ಬೆಂಗಳೂರು(ಜು.17): ಡಿಐಜಿ ರೂಪಾ ಅವರು ಜೈಲು ಅಕ್ರಮ ಬಯಲಿಗೆ ಎಳೆದ ಬೆನ್ನಲ್ಲೇ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳು ಒಂದೊಂದೇ ಬೆಳಕಿಗೆ ಬರತೊಡಗಿವೆ. ಆರು ತಿಂಗಳ ಹಿಂದೆ ವಿಚಾರಣಾಧೀನ ಕೈದಿ ಶ್ರೀನಿವಾಸ್ ಎಂಬಾತ ತನ್ನ ಸಹಚರರು ಮತ್ತು ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸುಬ್ರಹ್ಮಣ್ಯಪುರ ರೌಡಿಶೀಟರ್ ಆಗಿರುವ ಶ್ರೀನಿವಾಸ್ ಕೊಲೆ ಪ್ರಕರಣವೊಂದರಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಈತ ರಾಜಕೀಯವಾಗಿ ಸ್ಥಳೀಯವಾಗಿ ಗುರುತಿಸಿಕೊಂಡಿದ್ದ. ಈತನ 10ಕ್ಕೂ ಹೆಚ್ಚು ಸಹಚರರು ಜೈಲಿಗೆ ಗನ್ ಮಾದರಿಯ ಕೇಕ್ ತೆಗೆದುಕೊಂಡು ಹೋಗಿದ್ದರು. ಅಲ್ಲಿ ಶ್ರೀನಿವಾಸ್‌ನ ಬಳಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮ ಆಚರಿಸಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.