
ಬೆಂಗಳೂರು, [ಸೆ.29]: ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಅವಕಾಶ ನೀಡಿಲ್ಲ. ಇದು ನನಗೆ ತುಂಬಾ ನೋವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೂಪಾ ಶಶಿಧರ್ ಶಾಸಕಿಯಾಗಿದ್ದಾರೆ. ಧರ್ಮಸೇನ, ಆರ್.ಬಿ.ತಿಮ್ಮಾಪುರ ಮೇಲ್ಮನೆ ಸದಸ್ಯರಿದ್ದಾರೆ. ಇವರಲ್ಲಿ ಒಬ್ಬರಿಗೆ ಅವಕಾಶ ನೀಡಬೇಕು. ಈ ಬಗ್ಗೆ ಹೈಕಮಾಂಡ್ ಹಾಗೂ ರಾಜ್ಯ ನಾಯಕರಿಗೆ ಮನವಿ ಮಾಡಿದ್ದು, ಸಂಪುಟ ವಿಸ್ತರಣೆ ವೇಳೆ ಅವಕಾಶ ನೀಡುವ ವಿಶ್ವಾಸವಿದೆ ಎಂದರು.
ಈ ಹಿಂದೆ ಮಾದಿಗ ಸಮುದಾಯಕ್ಕೆ ಉತ್ತಮ ಅವಕಾಶ ನೀಡಲಾಗಿತ್ತು. ಸಿದ್ದರಾಮಯ್ಯ ತಮ್ಮ ಅಧಿಕಾರವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಿದ್ದರು. ಅವರೇ ನಮ್ಮ ಸಮುದಾಯಕ್ಕೆ ಅಭಿವೃದ್ಧಿ ನಿಗಮ ಕೂಡಾ ಮಾಡಿದ್ದಾರೆ ಎಂದು ಹೇಳಿದರು.
ಇನ್ನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಚೆ ನನಗಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತೋ ಅವರ ಪರ ಕೆಲಸ ಮಾಡ್ತೇವೆ. ನಾನು ಮೊದಲು ಪಕ್ಷದ ಯೂವ ಘಟಕದ ನಾಯಕನಾಗಿದ್ದವನು. ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇನೆ. ಅದನ್ನ ನೋಡಿ ಈಗ ಉತ್ತಮ ಸ್ಥಾನಮಾನ ನೀಡಬಹುದು ಎಂಬ ವಿಶ್ವಾಸವಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.