
ಯಾದಗಿರಿ (ಫೆ. 27): ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್- ಬಿಜೆಪಿ ನಡವಳಿಕೆಗೆ ಹೆಚ್ ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಸಮಸ್ಯೆ ಬಗೆಹರಿಸಬೇಕಾದವರೇ ಸುಮ್ಮನೆ ಕುಳಿತಿದ್ದಾರೆ. ಪ್ರಧಾನಿ ಮೋದಿ ಮಹಾದಾಯಿ ಬಗ್ಗೆ ಚಕಾರ ಎತ್ತುತ್ತಿಲ್ಲ. ಅತ್ತ ಅಮಿತ್ ಶಾ ರಾಜ್ಯದಲ್ಲಿ ಬಿಜೆಪಿ ಗೆದ್ದರೆ ಮಹದಾಯಿ ಬಗೆಹರಿಸುತ್ತೇವೆ ಎಂದು ಚೆಲ್ಲಾಟವಾಡುವ ಮಾತನಾಡುತ್ತಾರೆ. ಮತ್ತೊಂದೆಡೆ ರಾಹುಲ್ ಮಹದಾಯಿ ಹೋರಾಟಗಾರರನ್ನು ಸೌಜನ್ಯಕ್ಕೂ ಭೇಟಿ ಮಾಡದೆ ಪಲಾಯನ ಮಾಡಿದ್ದಾರೆ. ಇದೆಲ್ಲಾ ನೋಡಿದರೆ ಬಿಜೆಪಿ- ಕಾಂಗ್ರೆಸ್ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.
ರಾಜ್ಯಸಭಾ ಚುನಾವಣೆ ಒಂದು ಸೀಟು ಬಿಟ್ಟು ಕೊಡುವಂತೆ ಕಾಂಗ್ರೆಸ್ ಜೊತೆ ಮಾತುಕತೆ ನಡೆದಿದೆ.ಬಿಟ್ಟುಕೊಡದಿದ್ದರೆ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಪಾಂಡವರು ಆಸ್ತಿ ಕೇಳಿದರೆ ಕೌರವರು ಕೊಡದೆ ನಾಶವಾಗಿದ್ದು ಗೊತ್ತಿದೆಯಲ್ಲ ಅದೇ ರೀತಿಯಾಗುತ್ತದೆ ಎಂದು ಉದಾಹರಣೆ ನೀಡಿದ್ದಾರೆ.
ಚುನಾವಣೆ ಬಂದಿದೆ ಎಂದು ಕಾಂಗ್ರೆಸ್ ಬಿಜೆಪಿ ರಾಜಕೀಯ ಪಕ್ಷಗಳು ಟೆಂಪಲ್ ರನ್ ನಡೆಸುತ್ತಿವೆ. ಆದರೆ, ನಾವು ಮೊದಲಿನಿಂದಲೂ ದೇವಸ್ಥಾನಕ್ಕೆ ಹೋಗುತ್ತೇನೆ.ಇದು ನಮಗೂ ಅವರಿಗೂ ಇರುವ ವ್ಯತ್ಯಾಸ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಅವರ ಸಾಲ ಮನ್ನಾ ಮಾಡಿ ನೆರವಿಗೆ ಧಾವಿಸದೆ ಸತ್ತವರ ಮನೆ ಮುಂದೆ ಮುಷ್ಡಿ ಅಕ್ಕಿ ಬೇಡುತ್ತಿರುವ ಕಾರ್ಯಕ್ರಮ ಹಾಕಿಕೊಂಡಿರುವ ಬಿಜೆಪಿಗೆ ನಾಚಿಕೆಯೂ ಇಲ್ಲ ಎಂದು ಹೆಚ್ ಡಿ ಕೆ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.