ಗೆದ್ದ 24 ತಾಸಿನಲ್ಲಿ ರೈತರ, ಸ್ತ್ರೀಶಕ್ತಿ ಸಂಘದ ಸಾಲ ಮನ್ನಾ: ಎಚ್‌ಡಿಕೆ

By Suvarna Web DeskFirst Published Apr 2, 2018, 7:33 AM IST
Highlights

ಜೆಡಿಎಸ್‌ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಬ್ಯಾಂಕಿನಲ್ಲಿರುವ ರೈತರ .51 ಸಾವಿರ ಕೋಟಿ ಮತ್ತು ಸ್ತ್ರೀಶಕ್ತಿ ಸಂಘದ .4,300 ಕೋಟಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಕೊರಟಗೆರೆ: ಜೆಡಿಎಸ್‌ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಬ್ಯಾಂಕಿನಲ್ಲಿರುವ ರೈತರ .51 ಸಾವಿರ ಕೋಟಿ ಮತ್ತು ಸ್ತ್ರೀಶಕ್ತಿ ಸಂಘದ .4,300 ಕೋಟಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜೆಡಿಎಸ್‌ನಿಂದ ಭಾನುವಾರ ಏರ್ಪಡಿಸಿದ್ದ ವಿಕಾಸಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಕರ್ನಾಟಕ ರಾಜ್ಯದ ರೈತರ ಅಭಿವೃದ್ಧಿ ಸಾಧ್ಯವಿಲ್ಲ. ರಾಜ್ಯದಲ್ಲಿ ಕೇವಲ ಆರೋಪ ಪ್ರತ್ಯಾರೋಪದಲ್ಲೇ ಕಾಲ ಕಳೆದಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ಕೊನೆಗಾಲ ಹತ್ತಿರವಾಗಿದೆ ಎಂದು ಹೇಳಿದರು.

ಪರಂ ನಡೆ ಹಾಸ್ಯಾಸ್ಪದ:

ಈ ಹಿಂದೆ ನಾನು ಗ್ರಾಮ ವಾಸ್ತವ್ಯ ಮಾಡಿದಾಗ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಅವರು ಟೀಕಿಸುತ್ತಿದ್ದರು. ಈಗ ಅವರೇ ಗ್ರಾಮ ವಾಸ್ತವ್ಯ ಮಾಡುತ್ತಿರುವ ನಡೆ ಹಾಸ್ಯಾಸ್ಪದ ಎಂದು ಕುಮಾರಸ್ವಾಮಿ ತಿಳಿಸಿದರು.

ಇದಕ್ಕೂ ಮುನ್ನ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಳೇ ಪಿಬಿ ರಸ್ತೆಯಲ್ಲಿರುವ ಹುತಾತ್ಮ ವೀರಯೋಧ ಕೆ. ಜಾವೇದ್‌ ಅವರ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರ ಯೋಧನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.

ರಾಜ್ಯದಲ್ಲಿ ಆರೋಪ ಪ್ರತ್ಯಾರೋಪದಲ್ಲೇ ಕಾಲ ಕಳೆದಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ಕೊನೆಗಾಲ ಸಮೀಪಿಸಿದೆ. ಒಂದು ವೇಳೆ ಜೆಡಿಎಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಬ್ಯಾಂಕಿನಲ್ಲಿರುವ ರೈತರ .51 ಸಾವಿರ ಕೋಟಿ, ಸ್ತ್ರೀಶಕ್ತಿ ಸಂಘದ .4300 ಕೋಟಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದರು.

click me!