
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಸಂಖ್ಯೆಗಳದ್ದೇ ಮೇಲಾಟ. ಬಿಜೆಪಿ ಹೆಚ್ಚಿನ ಸ್ಥಾನ ಗಳಿಸುವಲ್ಲಿ ಯಶಸ್ವಿಯಾದರೂ, ಸರಕಾರ ರಚಿಸಲು ಅಗತ್ಯವಾದ ಸಂಖ್ಯಾಬಲ ಸಿಗದ ಕಾರಣ ಪ್ರಮಾಣ ವಚನ ಸ್ವೀಕರಿಸಿದ 55 ಗಂಟೆಗಳಲ್ಲಿಯೇ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೆ, 218 ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ 38 ಕ್ಷೇತ್ರಗಳನ್ನು ಗೆದ್ದು, 180ರಲ್ಲಿ ಸೋಲುಂಡು, 147 ಸ್ಥಾನಗಳಲ್ಲಿ ಗೆದ್ದ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದನ್ನು ವಿರೋಧಿಸಿ ಟ್ವೀಟರ್‌ನಲ್ಲಿ #HDKNotMyCM ಎಂಬ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ.
ಸುಳ್ಳು ಹೇಳುವವರು ಮುಖ್ಯಮಂತ್ರಿ ಆಗುವುದು ಬೇಡವೆಂದು ಬಿಜೆಪಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದನ್ನು ವಿರೋಧಿಸಿ, ಜನ ವಿರೋಧಿ ದಿನ ಆಚರಿಸಿದ್ದಾರೆ. ಕನ್ನಡ ಜನತೆಯೂ ಎಚ್.ಡಿ.ಕೆ ನಮ್ಮ ಮುಖ್ಯಮಂತ್ರಿಯಲ್ಲವೆಂಬುದನ್ನು ಟ್ವೀಟ್ ಮಾಡುತ್ತಿದ್ದಾರೆ.
ಕೇರಳದಲ್ಲಿ ನಿಫಾ ವೈರಸ್ ಮಾತ್ರ ದಾಳಿ ನಡೆಸುತ್ತಿದ್ದರೆ, ಕರ್ನಾಟಕವನ್ನು ಇಡೀ ದೇಶದ ಎಲ್ಲೆಡೆಯಿಂದ ಆಗಮಿಸಿರುವ ವೈರಸ್ ಅಟ್ಯಾಕ್ ಮಾಡಿದೆ, ಎಂದು ಕಾಂಗ್ರೆಸ್ ಸೇರಿ ದೇಶದ ವಿವಿಧ ಪ್ರಾದೇಶಿಕ ಪಕ್ಷಗಳ ಮುಖಂಡರು ರಾಜ್ಯಕ್ಕೆ ಆಗಮಿಸುತ್ತಿರುವುದಕ್ಕೆ ಜನರು ಅಳಲು ತೋಡಿಕೊಂಡಿದ್ದಾರೆ.
ಕಾಂಗ್ರೆಸ್‌ನ ಪ್ರಭಾವಿ, ಪ್ರತಿಭಾವಂತ ಮುಖಂಡರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ನೇತೃತ್ವದಲ್ಲಿ ಯಾವುದೇ ಸ್ಥಾನಮಾನವೂ ನೀಡದ ಹಿನ್ನೆಲೆಯಲ್ಲಿಯೂ ಜನರು ಆಕ್ರೋಶ ವ್ಯಕ್ತಪಡಿಸಿದ್ದು, 'ಶ್ರದ್ಧಾಂಜಲಿ' ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.