ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಪದತ್ಯಾಗ

By Web DeskFirst Published Jun 4, 2019, 11:23 AM IST
Highlights

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಪದತ್ಯಾಗ ಮಾಡಿದ್ದಾರೆ. ಅಧಿಕೃತವಾಗಿ ಸ್ಥಾನ ತೊರೆಯುತ್ತಿರುವುದಾಗಿ ವಿಶ್ವನಾಥ್  ಘೋಷಿಸಿದ್ದಾರೆ. ಪಕ್ಷದೊಳಗಿನ ಕೆಲ ಅಸಮಾಧಾನವು ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. 

ಬೆಂಗಳೂರು :  ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬೇಸರಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಘೋಷಿಸಿದ್ದಾರೆ. 

ಸ್ವಾಭಿಮಾನದ ಸಂಕೇತವಾಗಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ್ ಘೋಷಿಸಿದ್ದಾರೆ. ಜೆಡಿಎಸ್ ಕೊಟ್ಟ ಅವಕಾಶಕ್ಕೆ ಋಣಿಯಾಗಿದ್ದು, ಲೋಕಸಭಾ ಚುನಾವಣೆಯ ಸೋಲಿನ  ಹೊಣೆ ಹೊತ್ತು ರಾಜೀನಾಮೆ  ನೀಡುತ್ತಿರುವುದಾಗಿ ಹೇಳಿದ್ದಾರೆ. 

ವಿಶ್ವನಾಥ್ ಕೆಲ ತಿಂಗಳುಗಳ ಹಿಂದೆ ತಮ್ಮ ಅನಾರೋಗ್ಯದ ಕಾರಣಕ್ಕಾಗಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆಗ ದೇವೇಗೌಡರು ನಿರಾಕರಿಸಿದ್ದರಿಂದ ಸುಮ್ಮನಾಗಿದ್ದರು. ನಂತರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಸಿದ್ಧರಾಗಿದ್ದರು. ಆಗಲೂ ಗೌಡರು ಒಪ್ಪಿರಲಿಲ್ಲ. ನಂತರ ಅವರು ಸಮನ್ವಯ ಸಮಿತಿ ಬಗ್ಗೆ ಟೀಕಿಸಿದ್ದರು. ಇತ್ತೀಚೆಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‌ನ ಸಚಿವ ಸಾ.ರಾ.ಮಹೇಶ್ ವಿರುದ್ಧ ಹರಿಹಾಯ್ದಿದ್ದರು.

ಇದೀಗ ಅಧಿಕೃತವಾಗಿ ಪದತ್ಯಾಗ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. 

click me!