ಹಾದಿಯಾ ಕೇಸ್; ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್

By Suvarna Web DeskFirst Published Jan 23, 2018, 3:03 PM IST
Highlights

ಕೇರಳ ಹಾದಿಯಾ ಲವ್ ಜಿಹಾದ್ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಹಾಗೂ ಎನ್'ಐಎಗೆ ತನಿಖೆ ವಹಿಸುವಂತೆ ಹೇಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

ನವದೆಹಲಿ (ಜ.23): ಕೇರಳ ಹಾದಿಯಾ ಲವ್ ಜಿಹಾದ್ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಹಾಗೂ ಎನ್'ಐಎಗೆ ತನಿಖೆ ವಹಿಸುವಂತೆ ಹೇಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

ಹಾದಿಯಾ ಲವ್ ಜಿಹಾದ್ ಪ್ರಕರಣದ ತನಿಖೆಯನ್ನು ಮುಂದುವರೆಸಲು ಸಾಧ್ಯವಿಲ್ಲ. ಅವರ ಮದುವೆಯನ್ನು ಪ್ರಶ್ನಿಸಲೂ ಸಾಧ್ಯವಿಲ್ಲ. ಹಾದಿಯಾ ವಯಸ್ಕಳಾಗಿರುವುದರಿಂದ ಅವರನ್ನು ಪ್ರಶ್ನಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.  

ಏನಿದು ಪ್ರಕರಣ?
ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ ಅವರು ಶೆಫಿನ್ ಜಹಾನ್'ರನ್ನು ಪ್ರೀತಿಸುತ್ತಾರೆ. ಇಸ್ಲಾಮ್'ಗೆ ಮತಾಂತರಗೊಂಡು ಶೆಫಿನ್'ರನ್ನ ವಿವಾಹವಾಗುತ್ತಾರೆ. ಆದರೆ, ಹಾದಿಯಾಳ ಪೋಷಕರು ಇದೊಂದು ಲವ್ ಜಿಹಾದ್ ಕೇಸ್ ಎಂದು ಆರೋಪಿಸಿದ್ದಾರೆ. ತನ್ನ ಮಗಳ ಬ್ರೈನ್ ವಾಶ್ ಮಾಡಲಾಗಿದೆ. ಇಸ್ಲಾಮ್'ಗೆ ಮತಾಂತರ ಮಾಡುವ ವ್ಯವಸ್ಥಿತ ಪಿತೂರಿಗೆ ತನ್ನ ಮಗಳು ಬಲಿಯಾಗಿದ್ದಾಳೆ ಎಂದು ಹಾದಿಯಾಳ ತಂದೆ ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯ ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

click me!