
ಶಿವಮೊಗ್ಗ : ಬೇಳೂರು ಗೋಪಾಲಕೃಷ್ಣ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪನವರ ವಿರುದ್ಧ ನೀಡಿದ್ದ ಹೇಳಿಕೆಗಳನ್ನು ಪ್ರದರ್ಶಿಸಿ ಹಾಲಪ್ಪ ವಾಗ್ದಾಳಿ ನಡೆಸಿದ್ದಾರೆ.
ನನ್ನ ನಗುವನ್ನ ಕಿತ್ತುಕೊಂಡ ದುಷ್ಟರು ಸಾಗರದಲ್ಲೂ ಇರಬಾರದು, ಸೊರಬದಲ್ಲೂ ಇರಬಾರದು ಎಂದು ಗೋಪಾಲ ಕೃಷ್ಣ ವಿರುದ್ಧ ಕಿಡಿ ಕಾರಿದ್ದಾರೆ.
ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ಹೇಳಿದರೂ ಸಾಗರದಲ್ಲಿ ನಾನು ಬೇಳೂರು ಗೋಪಾಲಕೃಷ್ಣ ಗೆಲುವು ಪಡೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಹೇಳಿಕೆಯನ್ನು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.