
ಬೆಂಗಳೂರು(ನ.19): ದಾಖಲೆಗಳಿಲ್ಲದೆ ಕಾರಿನಲ್ಲಿ 49.50 ಲಕ್ಷ ಸಾಗಿಸುತ್ತಿದ್ದ ಆರು ಮಂದಿಯನ್ನು ಸಿಸಿಬಿ ಪೊಲೀಸರು ಗುರುವಾರ ರಾತ್ರಿ ಶೇಷಾದ್ರಿಪುರಂನ ಮಾದವನಗರದ ಬಳಿ ಬಂಸಿದ್ದಾರೆ.
ಗುರುವಾರ ರಾತ್ರಿ ಪೊಲೀಸರು ಮಾಧವನಗರ ಬಳಿ ವಾಹನಗಳ ತಪಾಸಣೆ ಕೈಗೊಂಡಿದ್ದರು. ಈ ವೇಳೆ ಡಸ್ಟರ್ ಕಾರ್ ಅನ್ನು ತಡೆದ ಪೊಲೀಸರು ಪರಿಶೀಲನೆ ಆರಂಭಿಸಿದ್ದರು. ಈ ವೇಳೆ ವಾಹನದಲ್ಲಿ ಎರಡು ಬ್ಯಾಗ್‌ನಲ್ಲಿ 49.50 ಲಕ್ಷ ಹಣ ಕಂಡು ಬಂದಿದೆ. ಆದರೆ, ಹಣ ಸಾಗಿಸುತ್ತಿದ್ದವರು ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಈ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಿದ ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದಿಂದ ಹಣ ತರಲಾಗುತ್ತಿತ್ತು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.