
ಶಿವಮೊಗ್ಗ(ಆ.23): ರಾಜ್ಯದ ಗಮನ ಸೆಳೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಯಾದ ಮಾಜಿ ಶಾಸಕ ಹರತಾಳು ಹಾಲಪ್ಪ ತಮ್ಮ ತವರು ಕ್ಷೇತ್ರ ಸೊರಬದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡ್ರು. ಹುಟ್ಟೂರು ಹೊಳೆಕೊಪ್ಪದಿಂದ ಸೊರಬ ಪಟ್ಟಣದವರೆಗೆ ಸುಮಾರು 20 ಕಿ.ಮೀ.ದೂರ ನೂರಾರು ಸಂಖ್ಯೆಯಲ್ಲಿ ಬೈಕ್ ರ್ಯಾಲಿಯಲ್ಲಿ ಮೆರವಣಿಗೆ ನಡೆಸಿದ ಬಳಿಕ ಬಹಿರಂಗ ಸಬೆ ನಡೆಸಿದರು. ಈ ವೇಳೆ ಅವರಾಡಿದ ಮಾತುಗಳು ರಿವೇಂಜ್ ಪಾಲಿಟಿಕ್ಸ್ ಮಾಡುತ್ತಿದ್ದರಾ ಎಂಬ ನುಮಾನಗಳನ್ನುಮೂಡಿಸಿದೆ.
ಈ ಸಭೆಯಲ್ಲೇ ಹೆಸರು ಹೇಳದೆ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ವಿರುದ್ಧ ಹಾಲಪ್ಪ ವಾಗ್ದಾಳಿ ನಡೆಸಿದರು. ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ರು ಎಂದು ಆರೋಪಿಸಿದ್ದಾರೆ. ಇದೇ ವೇಳೆ ಮಧು ಬಂಗಾರಪ್ಪ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಅವರ ಜೀವನದಲ್ಲಿ ಜೋಸೆಫ್ ಮೇರಿ ಯಾರು..? ಅವರು ಯಾರೆಂದು? ಅವರ ಮನೆ ದೇವರು ಚಂದ್ರಗುತ್ತಿ ದೇವರ ಮೇಲೆ ಆಣೆ ಮಾಡುತ್ತಾರಾ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.