
ನವದೆಹಲಿ(ಮಾ.02): ಮೀಸಲಾತಿ ಸೇರಿದಂತೆ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 20 ರಂದು ರಾಷ್ಟ್ರ ರಾಜಧಾನಿಯನ್ನು ಬಂದ್ ಮಾಡುತ್ತೇವೆ ಎಂದು ಅಖಿಲ ಭಾರತ ಜಾಟ್ ಆರಕ್ಷಣ ಸಂಘರ್ಷ ಸಮಿತಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದೆ.
ಜಾಟ್ ಸಮುದಾಯವನ್ನು ಕೇಂದ್ರ ಸರ್ಕಾರ ಒಬಿಸಿ ಎಂದು ಘೋಷಿಸಬೇಕು, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು,ಹರ್ಯಾಣ ಸರ್ಕಾರದಲ್ಲಿರುವ ನಮ್ಮ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು, ಹೋರಾಟಲ್ಲಿ ಕೈಗೊಂಡ ನಮ್ಮ ಜನರ ಕುಟುಂಬಗಳಿಗೆ ಪರಿಹಾರ ನೀಡಬೇಕು ಅಲ್ಲದೆ ಆ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಅಖಿಲ ಭಾರತ ಜಾಟ್ ಆರಕ್ಷಣ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಯಶಪಾಲ್ ಮಲ್ಲಿಕ್ ಆಗ್ರಹಿಸಿದ್ದಾರೆ.
ನಮ್ಮ ಮನವಿಯನ್ನು ಪರಿಗಣಿಸದಿದ್ದರೆ ಸಂಸತ್ತಿಗೆ ಮುತ್ತಿಗೆ ಹಾಕಲಾಗುವುದು ಜೊತೆಗೆ ನಮ್ಮ ವಿದ್ಯುತ್, ನೀರಿನ ಬಿಲ್ಲನ್ನು ಪಾವತಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ದೆಹಲಿಯ ಜಂತರ್ ಮಂತರ್'ನಲ್ಲಿ ಉತ್ತರ ಪ್ರದೇಶ, ಹರ್ಯಾಣ, ಉತ್ತರಖಂಡ್, ದೆಹಲಿ ಹಾಗೂ ಪಂಜಾಬ್ ನಿಂದ ಆಗಮಿಸಿದ್ದ 5 ಸಾವಿರಕ್ಕೂ ಹೆಚ್ಚು ಜಾಟರು ಪ್ರತಿಭಟನೆ ಕೈಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.