ಅಧಿಕಾರಿಗೆ ವಂಚನೆ : ಖ್ಯಾತ ಗಾಯಕಿ ಅರೆಸ್ಟ್

Published : Jan 11, 2019, 01:02 PM ISTUpdated : Jan 11, 2019, 01:28 PM IST
ಅಧಿಕಾರಿಗೆ ವಂಚನೆ : ಖ್ಯಾತ ಗಾಯಕಿ ಅರೆಸ್ಟ್

ಸಾರಾಂಶ

ಅಧಿಕಾರಿಗೆ ವಂಚಿಸಿದ ಪ್ರಕರಣವೊಂದಕ್ಕೆ ಪ್ರಖ್ಯಾತ ಹಾಡುಗಾರ್ತಿಯೋರ್ವಳನ್ನು ಬಂಧಿಸಲಾಗಿದೆ. ಕಳೆದ 2 ವರ್ಷದ ಹಿಂದೆ ಆಕೆಯ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿತ್ತು. ಸದ್ಯ ಆಕೆ ಹರ್ಯಾಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. 

ನವದೆಹಲಿ : ಹರ್ಯಾಣ ಮೂಲದ ಹಾಡುಗಾರ್ತಿಯೋರ್ವಳನ್ನು ಸರ್ಕಾರಿ ಅಧಿಕಾರಿಯೋರ್ವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. 

2016ರಲ್ಲಿ ನೋಟು ಅಮಾನ್ಯೀಕರಣವಾದ ಸಂದರ್ಭದಲ್ಲಿ ಒಟ್ಟು 60 ಲಕ್ಷ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪೊಲೀಸರು ಬಂಧಿಸಿದ್ದಾರೆ. 

ಪ್ರಧಾನಿ ಹೆಸರಲ್ಲಿ ನಕಲಿ ದಾಖಲೆ : ಹೈಕೋರ್ಟ್‌ನಲ್ಲಿ ಕೆಲಸಕ್ಕೆ ಅರ್ಜಿ!

ಬಂಧಿತ ಮಹಿಳೆಯನ್ನು ಶಿಖಾ ರಾಘವ್ ಎನ್ನಲಾಗಿದ್ದು, ಕಳೆದ 2 ವರ್ಷಗಳಿಂದಲೂ ಕೂಡ ಈಕೆಯ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಿ, ಕೊನೆಗೂ ಅರೆಸ್ಟ್ ಮಾಡಲಾಗಿದೆ. 

ಹರ್ಯಾಣದಲ್ಲಿ ಆಕೆ ನೆಲೆಸಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ತೆರಳಿದ ಪೊಲೀಸರು ಆಕೆಯನ್ನು ಬಂಧಿಸಿ ದಿಲ್ಲಿಗೆ ಕರೆತರಲಾಗಿದೆ ಎಂದು ಡಿಸಿಪಿ ನೂಪುರ್ ಪ್ರಸಾದ್ ಹೇಳಿದ್ದಾರೆ. 

ಅಲ್ಲದೇ ಆಕೆಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು ಹಣ ವಸೂಲಿಯ ಯತ್ನ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ