ಬಂಡೆದ್ದು ಕಾಂಗ್ರೆಸ್ ಸೇರಿದ್ದ ಬಾಲಕೃಷ್ಣಗೆ ಎದುರಾಗಿದೆ ಪ್ರತಿಷ್ಠೆಯ ಪ್ರಶ್ನೆ..!

By Suvarna Web DeskFirst Published Feb 27, 2018, 12:50 PM IST
Highlights

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಲಗೈ ಬಂಟರಂತಿದ್ದ ಎಚ್.ಸಿ. ಬಾಲಕೃಷ್ಣ ಕಳೆದ ಬಾರಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಅವರೀಗ ಕಾಂಗ್ರೆಸ್ ಸೇರಿ, ಅಭ್ಯರ್ಥಿಯಾಗುತ್ತಿದ್ದಾರೆ. ತಾವೇ ಕಾಂಗ್ರೆಸ್ ಹುರಿಯಾಳು ಎಂದು ಕ್ಷೇತ್ರದ ತುಂಬೆಲ್ಲಾ ಓಡಾಡುತ್ತಿದ್ದಾರೆ.

ಮಾಗಡಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಲಗೈ ಬಂಟರಂತಿದ್ದ ಎಚ್.ಸಿ. ಬಾಲಕೃಷ್ಣ ಕಳೆದ ಬಾರಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಅವರೀಗ ಕಾಂಗ್ರೆಸ್ ಸೇರಿ, ಅಭ್ಯರ್ಥಿಯಾಗುತ್ತಿದ್ದಾರೆ. ತಾವೇ ಕಾಂಗ್ರೆಸ್ ಹುರಿಯಾಳು ಎಂದು ಕ್ಷೇತ್ರದ ತುಂಬೆಲ್ಲಾ ಓಡಾಡುತ್ತಿದ್ದಾರೆ.

 ಕಳೆದ ಚುನಾವಣೆಯಲ್ಲಿ ಬಾಲಕೃಷ್ಣ ಎದುರು ಕಾಂಗ್ರೆಸ್ಸಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಜಿ.ಪಂ. ಸದಸ್ಯ ಎ. ಮಂಜು ಅವರು ಜೆಡಿಎಸ್ ಸೇರಿದ್ದಾರೆ. ಅವರನ್ನೇ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ‘ಸೋಲಿಲ್ಲದ ಸರದಾರ’ ಎನಿಸಿಕೊಂಡಿರುವ ಬಾಲಕೃಷ್ಣ ಅವರು ಜೆಡಿಎಸ್ ನಾಯಕತ್ವದ ವಿರುದ್ಧವೇ ಸಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಬಾಲಕೃಷ್ಣ ಅವರ ಗೆಲುವಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆಯೂ ಅಡಗಿದೆ. ಹೀಗಾಗಿ ಈ ಬಾರಿ ಈ ಕ್ಷೇತ್ರದ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್, ಜೆಡಿಎಸ್ ನಡುವೆ ಜಿದ್ದಾಜಿದ್ದಿ ಹೋರಾಟ ಖಚಿತವಾಗಿದೆ. ಬಿಜೆಪಿಯಿಂದ ಹೊಸ ಮುಖ ಕಣಕ್ಕಿಳಿವ ಸಾಧ್ಯತೆ ಇದೆ.

click me!