
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಕುರಿತಂತೆ ಕೇಂದ್ರದೊಂದಿಗೆ ಹೋರಾಟ ನಡೆಸದಂತೆ ಮತ್ತು ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರ ಹೆಸರನ್ನು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.
ಪದ್ಮನಾಭನಗರದ ನಿವಾಸದಲ್ಲಿ ಶನಿವಾರ ದೇವೇಗೌಡ ಅವರನ್ನು ಕುಮಾರಸ್ವಾಮಿ ಭೇಟಿಯಾಗಿ ಸುಧೀರ್ಘವಾಗಿ ಚರ್ಚಿಸಿದರು. ಈ ವೇಳೆ ಕೇಂದ್ರದ ವಿರುದ್ಧ ಸಮರ ನಡೆಸದಂತೆ ತಿಳಿಹೇಳಿದ್ದಾರೆ ಎಂದು ತಿಳಿದುಬಂದಿದೆ. ಸುಪ್ರೀಂಕೋರ್ಟ್ ನಿರ್ದೇಶನ ಮೇರೆಗೆ ಕೇಂದ್ರವು ಪ್ರಾಧಿಕಾರ ರಚನೆಯಾಗಿದೆ. ಪ್ರಾಧಿಕಾರ ರಚನೆಗೆ ಸಂಬಂಧಪಟ್ಟಂತೆ ಅಧಿಸೂಚನೆಯಲ್ಲಿನ ಲೋಪಗಳ ಕುರಿತು ಸಭೆ ಕರೆಯಲು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುವಂತೆ ಕಿವಿಮಾತು ಹೇಳಿದರು ಎನ್ನಲಾಗಿದೆ.
ಸಂಸತ್ ಅಧಿವೇಶನದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯ ನ್ಯೂನತೆಗಳನ್ನು ಪ್ರಸ್ತಾಪಿಸಲಾಗುವುದು. ಅಲ್ಲಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಪ್ರಯತ್ನ ನಡೆಸುವುದು ಸೂಕ್ತ. ಮಾತ್ರವಲ್ಲ ಕೇಂದ್ರ ಸರ್ಕಾರದ ಸೂಚನೆಯಂತೆ ಪ್ರಾಧಿಕಾರಕ್ಕೆ ಇಬ್ಬರು ಹೆಸರನ್ನು ಅದಷ್ಟುಶೀಘ್ರವಾಗಿ ಶಿಫಾರಸು ಮಾಡುವಂತೆ ತಿಳಿಸಿದರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.