
ಬೆಂಗಳೂರು : ಸಮ್ಮಿಶ್ರ ಸರ್ಕಾರ ಉಳಿಸುವ ಹೊಣೆಗಾರಿಕೆ ನನ್ನ ಮೇಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ. ಹಾಗಿದ್ದ ಮೇಲೆ ಸರ್ಕಾರಕ್ಕೆ ಕಿಂಚಿತ್ತೂ ಧಕ್ಕೆಯಾಗಲು ಸಾಧ್ಯವೇ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಹಳೆಯ ಮುನಿಸು ಮರೆತು ಸಿದ್ದರಾಮಯ್ಯ ಅವರನ್ನು ದೇವೇಗೌಡ
ಹೊಗಳಿದ್ದಾರೆ.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಾನಾ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಭಾಗವಾಗಿ ನಡೆದ ಸಭೆಯಲ್ಲಿಮಾತನಾಡಿದ ದೇವೇಗೌಡ ಅವರು ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯವನ್ನು ಭಾಷಣದಲ್ಲಿ ಪ್ರಸ್ತಾಪಿಸುವ ಮೂಲಕ ಅಚ್ಚರಿ ಮೂಡಿಸಿದರು. ‘‘ನಾನು, ಸಿದ್ದರಾಮಯ್ಯ ಒಟ್ಟಿಗೇ ಇದ್ದು ಹೋರಾಟ ಮಾಡಿದವರು. ಆತ್ಮೀಯರಾ ಗಿದ್ದ ವರು. ಆದರೆ ಕಾರಣಾಂತರಗಳಿಂದ ಅವರು ಕಾಂಗ್ರೆಸ್
ಸೇರಿ ಮುಖ್ಯಮಂತ್ರಿಯಾ ದರು. ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ.
ಈಗ ಸಿದ್ದರಾಮಯ್ಯ ಅವರೇ ಈ ಮೈತ್ರಿ ಸರ್ಕಾರ ಉಳಿಸುವ ಹೊಣೆಗಾರಿಕೆ ನನ್ನದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆಭರವಸೆ ನೀಡಿದ್ದಾರೆ. ಆದ್ದರಿಂದ ಈ ಸರ್ಕಾರಕ್ಕೆ ಕಿಂಚಿತ್ತೂ ಧಕ್ಕೆ ಆಗಲು ಸಾಧ್ಯವೇ ಇಲ್ಲ’’ ಎಂದರು. 135 ವರ್ಷಗಳ ಇತಿಹಾಸವುಳ್ಳ ಕಾಂಗ್ರೆಸ್‌ಗೆ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಶಕ್ತಿ ಇದೆ. ಜತೆಗೆ, ಸಿದ್ದರಾಮಯ್ಯನವರೇ ಸರ್ಕಾರ ಉಳಿಸೋ ಜವಾಬ್ದಾರಿ ತೆಗೆದುಕೊಂಡಿ ದ್ದಾರೆ. ಹೀಗಾಗಿ ನಾನು ಭವಿಷ್ಯ ನುಡಿಯುತ್ತಿ ದ್ದೇನೆ.
ಈ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ ದೇವೇಗೌಡ, ಅವರ ಸಿಟ್ಟು ಏನೆಂಬುದು ನನಗೆ ಗೊತ್ತಿದೆ. ಸರ್ಕಾರ ರಚಿಸುವಷ್ಟು ಶಾಸಕರ ಸಂಖ್ಯಾಬಲ ಇಲ್ಲದಿದ್ದರೂ ತರಾತುರಿಯಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಇದು ಅವರ ತಪ್ಪು. ಅದು ಗೊತ್ತಿದ್ದರೂ ಈಗ ನಮ್ಮನ್ನು ಟೀಕಿಸಿದರೆ ಹೇಗೆ? ಎಂದರು.
ಪುತ್ರರಿಂದ ಸಾಕಾರ: ತವರು ಜಿಲ್ಲೆ ಹಾಸನದ ಅಭಿವೃದ್ಧಿಗಾಗಿ ನಾನು ಹೊಂದಿದ್ದ ಕನಸನ್ನು ನನ್ನ ಇಬ್ಬರು ಪುತ್ರರು ಸಾಕಾರ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಎರಡನೇ ಬಾರಿ ಹೃದಯ ಚಿಕಿತ್ಸೆಯಾಗಿದೆ. ಆದರೂ ಅವರು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಾಳ್ಮೆ , ಸಹನೆ ಇದೆ. ದುಡುಕು ಸ್ವಭಾವ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.