
ಬೆಂಗಳೂರು[ಜ.27]: ಕಾಂಗ್ರೆಸ್ ನಾಯಕರು ಶಿಫಾರಸು ಮಾಡಿದ ಒಂದು ತಿಂಗಳ ಬಳಿಕ ಕೊನೆಗೂ ಡಾ.ಅಜಯ್‌ಸಿಂಗ್ ಅವರನ್ನು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಡಿಸೆಂಬರ್ ಕೊನೆಯ ವಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿಗಮ ಮಂಡಳಿ ನೇಮಕಾತಿ ಕುರಿತು ಮಾಡಿದ್ದ ಶಿಫಾರಸಿನಲ್ಲಿ ಜೇವರ್ಗಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಧರಂಸಿಂಗ್ ಪುತ್ರ ಅಜಯ್‌ಸಿಂಗ್ ಅವರನ್ನು ವಿಶೇಷ ಪ್ರತಿನಿಧಿಯಾಗಿ ನೇಮಿಸುವಂತೆಯೂ ಸೂಚಿಸಲಾಗಿತ್ತು. ಎರಡು ನಿಗಮ ಮಂಡಳಿ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ನೇಮಕಾತಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಡೆಹಿಡಿದಿದ್ದರು. ಇದು ಕಾಂಗ್ರೆಸ್ ಶಾಸಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಇತ್ತೀಚೆಗೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮೂಲಕ ಬಂದಿರುವ ನೇಮಕಾತಿ ಶಿಫಾರಸನ್ನು ತಡೆಹಿಡಿಯುವುದು ನೇರವಾಗಿ ಅವರಿಗೆ ಅವಮಾನ ಮಾಡಿದಂತೆ ಆಗುತ್ತದೆ. ಹೀಗಾಗಿ ತಡೆಹಿಡಿದಿರುವ ನೇಮಕಾತಿ ಕುರಿತ ಆದೇಶ ಕೂಡಲೇ ಹೊರಡಿಸಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಪ್ಪಿದ್ದು, ಆದೇಶ ಹೊರಡಿಸುವುದಾಗಿ ತಿಳಿಸಿದ್ದರು. ಅದರಂತೆ ಕಡತಕ್ಕೆ ಸಹಿ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ