
ನವದೆಹಲಿ : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಎಚ್.ಡಿ ಕುಮಾರಸ್ವಾಮಿ ಅವರ ವಿಶ್ವಾಸ ಮತ ಯಾಚನೆಗೆ ಬಿಜೆಪಿ ಮುಖಂಡರು ಯಾರೂ ಕೂಡ ಗೈರು ಹಾಜರಾಗದಂತೆ ಬಿಜೆಪಿ ಹೈ ಕಮಾಂಡ್ ಸೂಚನೆ ನೀಡಿದೆ.
ವಿಶ್ವಾಸ ಮತದ ವೇಳೆ ಗೊಂದಲಕ್ಕೆ ಅವಕಾಶ ನೀಡಬೇಡಿ ಎಂದು ಸ್ಪಷ್ಪ ನಿರ್ದೇಶನ ನೀಡಲಾಗಿದೆ. ಅಲ್ಲದೇ ಶಾಂತಿಯುತವಾಗಿ ವರ್ತಿಸಬೇಕು. ಇನ್ನು ಈ ವೇಳೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ಇನ್ನು ಕರ್ನಾಟಕ ರಾಜಕಾರಣವು ದೇಶದ ಹಲವು ಪಕ್ಷಗಳನ್ನು ಒಗ್ಗೂಡಿಸಿದೆ. ಬಿಜೆಪಿಯಿಂದ ಒಂದು ಕಡೆ ತಪ್ಪಾದರೂ ಕೂಡ ಹಲವು ಕಡೆ ಅದಕ್ಕೆ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಹೈ ಕಮಾಂಡ್ ಶಾಸಕರಿಗೆ ತಿಳಿಸಿದೆ.
ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನಿರ್ದೇಶನದಂತೆ ನಡೆದುಕೊಳ್ಳಬೇಕು. ಕರ್ನಾಟಕದಲ್ಲಿ ರಚನೆಯಾದ ಈ ಮೈತ್ರಿ ಸರ್ಕಾರ ಹಲವು ದಿನಗಳ ಕಾಲ ಉಳಿಯುವುದಿಲ್ಲ. ಶಾಸಕರು ವಿಶ್ವಾಸವನ್ನು ಕಳೆದುಕೊಳ್ಳಬೇಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.