
ಬೆಂಗಳೂರು: ಮುಂದಿನ ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆಗೆ ಹಣ ಹೊಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಿಂದ ಹಣ ಲೂಟಿ ಮಾಡುತ್ತಿದ್ದು, ಕರ್ನಾಟಕ ಇವರ ಪಾಲಿಗೆ ಹುಲ್ಲುಗಾವಲಿನಂತಾಗಿದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜೆ.ಪಿ.ನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರವು ಬೊಕ್ಕಸವನ್ನು ಖಾಲಿ ಮಾಡಿದೆ ಎಂದು ಆಪಾದಿಸಿದರು.
ರಾಜಕಾಲುವೆ ಹೂಳೆತ್ತಲು ನಿಗದಿಪಡಿಸಿದ ದರಕ್ಕಿಂತ ಶೇ.22ಕ್ಕಿಂತ ಹೆಚ್ಚಿನ ದರಕ್ಕೆ ಕಾಮಗಾರಿ ನೀಡಲಾಗಿದೆ. ಹೊಳೆತ್ತುವ ಕಾಮಗಾರಿಯನ್ನು ಆರು ಪ್ಯಾಕೇಜ್ ಮಾಡಿ ಅದರ ಹಣವನ್ನು ಉತ್ತರ ಪ್ರದೇಶದ ಚುನಾವಣಾ ಖರ್ಚಿಗೆ ವರ್ಗಾವಣೆ ಮಾಡಿದ್ದಾರೆ. ಇದೀಗ ಟೆಂಡರ್ ಶ್ಯೂರ್ ಸೇರಿದಂತೆ ಇತರೆ ಕಾರ್ಯಗಳ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ. ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಹುಲ್ಲುಗಾವಲು ಆಗಿದೆ ಎಂದು ಕಿಡಿ ಕಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.