ಅನಾರೋಗ್ಯದ ನಡುವೆಯೂ ಪ್ರವಾಹ ಪೀಡಿತ ಪ್ರದೇಶಕ್ಕೆ HDK ಭೇಟಿ

Published : Aug 10, 2019, 12:00 PM ISTUpdated : Aug 10, 2019, 05:02 PM IST
ಅನಾರೋಗ್ಯದ ನಡುವೆಯೂ ಪ್ರವಾಹ ಪೀಡಿತ ಪ್ರದೇಶಕ್ಕೆ HDK ಭೇಟಿ

ಸಾರಾಂಶ

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾರೋಗ್ಯದ ನಡುವೆಯೂ ನಿರಾಶ್ರಿತರ ಸಮಸ್ಯೆ ಆಲಿಸಿದ್ದಾರೆ.

ಬೆಳಗಾವಿ [ಆ.10]: ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹದ ಅಬ್ಬರಕ್ಕೆ ಜನಜೀವನ ತತ್ತರಿಸಿದೆ. ಸಂಪೂರ್ಣ ಕರ್ನಾಟಕ ನೀರಿನಲ್ಲಿ ಮುಳುಗುತ್ತಿದೆ. 

"

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳ ಜನರನ್ನು ಭೇಟಿ ಮಾಡಿದ್ದಾರೆ. 

ಬೆಳಗಾವಿ, ಧಾರವಾಡ ಭಾಗಗಳಲ್ಲಿ ಇಂದು ಪ್ರವಾಸ ಮಾಡುವುದಾಗಿ ಹೇಳಿದ ಅವರು  ತೀವ್ರ ಜ್ವರವಿದ್ದು, ಅನಾರೋಗ್ಯದ ನಡುವೆಯೂ ನಿರಾಶ್ರಿತ ಕೇಂದ್ರಗಳ ಜನರ ಸಂಕಷ್ಟ ಕೇಳಿದ್ದಾರೆ.  

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಾನುವಾರ ಕೊಡಗು, ಮೈಸೂರು ಕಡೆ ಪ್ರಯಾಣ ಬೆಳೆಸಲಿದ್ದೇವೆ. ಕೊಡಗಿನಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಕೂಡ ಕೊಡಗಿನಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಲವು ಶಾಸಕರೊಂದಿಗೆ ಇಲ್ಲಿಗೆ ತೆರಳಿ ನೆರೆ ಪೀಡಿತರ ನೆರವಿಗೆ ನಿಲ್ಲಲಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. 

ಇನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಸೋಮವಾರದಿಂದ ಉತ್ತರ ಕರ್ನಾಟಕ ಪ್ರವಾಸ ಮಾಡಲಿದ್ದಾರೆ. ರಾಯಚೂರು, ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ ಎಂದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!