
ಬೆಂಗಳೂರು[ಜು.14]: ಮೈತ್ರಿ ಸರ್ಕಾರದ ಉಳಿವಿಗಾಗಿ ಟೆಂಪಲ್ ರನ್ ಮುಂದುವರಿಸಿರುವ ದೈವ ಭಕ್ತ ಸಚಿವ ಎಚ್.ಡಿ.ರೇವಣ್ಣ ಅವರು ನಗರದ ಗಣಪತಿ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿಸಿದರು.
ಇತ್ತೀಚೆಗೆ ಶಾರದಾಂಬೆ ದೇವಾಲಯ ಮತ್ತು ತಿರುಪತಿಗೆ ಹೋಗಿ ವಿಶೇಷ ಪೂಜೆ ಮಾಡಿಸಿಕೊಂಡು ಬಂದಿದ್ದ ರೇವಣ್ಣ ಶನಿವಾರ ನಗರದ ಜಯನಗರದಲ್ಲಿನ ಗಣಪತಿ ದೇವಾಲಯದಲ್ಲಿ ಮೃತ್ಯಂಜಯ ಹೋಮ ನೆರವೇರಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ಸಭಾಧ್ಯಕ್ಷರನ್ನು ಕೋರಿದ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ಗೆಲುವಿಗಾಗಿ ಈ ಹೋಮ ನಡೆಸಿದ್ದಾರೆ. ಸರ್ಕಾರ ಸುಭದ್ರವಾಗಿರಲು ಎಂಟು ಅರ್ಚಕರಿಂದ ಮೃತ್ಯುಂಜಯ ಹೋಮ ಹಾಗೂ ಗಣಹೋಮ ಮಾಡಿಸಿದ್ದಾರೆ ಎಂದು ಹೇಳಲಾಗಿದೆ.
ಸರ್ಕಾರದ ಉಳಿವಿಗಾಗಿ ಕಳೆದ ಐದು ದಿನಗಳಿಂದ ಬರಿಗಾಲಿನಲ್ಲಿ ಓಡಾಡುತ್ತಿರುವ ರೇವಣ್ಣ ಅವರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವಲ್ಲಿ ನಿರತರಾಗಿದ್ದಾರೆ. ಮಿತ್ರ ಪಕ್ಷದ ಮುಖಂಡರೆಲ್ಲಾ ಅತೃಪ್ತರನ್ನು ಸೆಳೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರೆ ರೇವಣ್ಣ ಮಾತ್ರ ದೇವಾಲಯಗಳ ಪ್ರವಾಸದಲ್ಲಿ ತೊಡಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.