
ಬೆಂಗಳೂರು(ಜೂನ್ 13): ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಎಚ್'ಡಿಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ವಜಾ ಮಾಡಿದೆ. ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡವು ಜೆಡಿಎಸ್ ರಾಜ್ಯಾಧ್ಯಕ್ಷರನ್ನು ಯಾವಾಗ ಬೇಕಾದರೂ ಬಂಧಿಸುವ ಸಾಧ್ಯತೆ ಇದೆ.
ಮೇ 17ರಂದು ನ್ಯಾಯಾಲಯವು ಎಚ್'ಡಿಕೆಗೆ ಒಂದು ವಾರದವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಆ ಒಂದು ವಾರದಲ್ಲಿ ಎಸ್'ಐಟಿ ವಿಚಾರಣೆಗೆ ಹಾಜರಾಗಬೇಕೆಂದು ಅವರಿಗೆ ಸೂಚನೆ ನೀಡಲಾಗಿತ್ತು. ಅದಾದ ಬಳಿಕ ಕುಮಾರಸ್ವಾಮಿಯವರು ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು.
ಏನಿದು ಪ್ರಕರಣ?
2007ರಲ್ಲಿ ಜಂತಕಲ್ ಮೈನಿಂಗ್ ಕಂಪನಿಯ ಗಣಿಗಾರಿಕೆ ಲೈಸೆನ್ಸ್ ಅನ್ನು ಅಕ್ರಮವಾಗಿ ನವೀಕರಣ ಮಾಡಿದ ಆರೋಪ ಎಚ್'ಡಿಕೆ ಮೇಲಿದೆ. ನಕಲಿ ದಾಖಲೆಗಳ ಆಧಾರದ ಮೇಲೆ ಹಲವು ನಿಯಮಗಳನ್ನು ಗಾಳಿಗೆ ತೂರಿ 40 ವರ್ಷಗಳವರೆಗೆ ಪರವಾನಗಿ ನವೀಕರಿಸಲಾಗಿತ್ತು. ರಾಜ್ಯ ಸರಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರು ಲೈಸೆನ್ಸ್ ರಿನಿವಲ್ ಮಾಡಿಸಿದ್ದರು. ಈ ಸಂಬಂಧ ಅವರನ್ನು ಮೇ 15ರಂದು ಎಸ್'ಐಟಿ ತಂಡ ಬಂಧಿಸಿತು. ವಿಚಾರಣೆ ವೇಳೆ ಬಡೇರಿಯಾ ಅವರು ಸಿಎಂ ಕಚೇರಿಯ ಸೂಚನೆ ಮೇರೆಗೆ ತಾನು ಆ ಕೆಲಸ ಮಾಡಿದೆ ಎಂದು ಬಡೇರಿಯಾ ಹೇಳಿದ್ದರು. ಆ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿದ್ದರು. ಆದರೆ, ತಾನು ಯಾವುದೇ ಅಕ್ರಮ ಮಾಡಿಲ್ಲ ಎಂಬುದು ಎಚ್'ಡಿಕೆ ವಾದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.